INFORMATION NEWS

ಶಿಕ್ಷಕ ಹುದ್ದೆಗಳಿಗೆ ಫೆ.24 ರಂದು ನೇರ ಸಂದರ್ಶನ! ವಿವರ ಓದಿ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಮಲೆನಾಡು ಟುಡೆ ಸುದ್ದಿ / ಹಾವೇರಿ / ಜಿಲ್ಲೆಯ ಡಯಟ್ ಕ್ಯಾಂಪಸ್ ಆವರಣದಲ್ಲಿರುವ ಕರಜಗಿ ರಸ್ತೆಯ ಕೇಂದ್ರೀಯ ವಿದ್ಯಾಲಯದಲ್ಲಿ 2026 ಮತ್ತು 27ನೇ ಸಾಲಿನ ಶೈಕ್ಷಣಿಕ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಬೋಧಕ ಹಾಗೂ ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

KV Haveri Recruitment

ಈ ಹುದ್ದೆಗಳಿಗೆ ಫೆಬ್ರವರಿ 24, 2026 ರ ಮಂಗಳವಾರದಂದು ನೇರ ಸಂದರ್ಶನ ನಡೆಯಲಿದೆ. ಆಸಕ್ತರು ಸಂದರ್ಶನದ ದಿನ ಬೆಳಿಗ್ಗೆ 8:30 ರಿಂದ 9:30 ರ ಅವಧಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಶಾಲೆಯ ಆಡಳಿತ ಮಂಡಳಿ ತಿಳಿಸಿದೆ.

ಶಿವಮೊಗ್ಗ, ಸಾಗರ, ಶಿರಸಿ ಸೇರಿ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿನ ಅಡಕೆ ದರ ಪಟ್ಟಿ ಇಲ್ಲಿದೆ

KV Haveri Recruitment details

  • ವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲಾ ಶಿಕ್ಷಕರು, ಸಂಗೀತ ಶಿಕ್ಷಕರು ಹಾಗೂ ತರಬೇತುದಾರರ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. 
  • ಪದವೀಧರ ಶಿಕ್ಷಕರ (ಟಿಜಿಟಿ) ಹುದ್ದೆಗಳಾದ ಇಂಗ್ಲಿಷ್, ಹಿಂದಿ, ಸಂಸ್ಕೃತ, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಿಗೆ ಶಿಕ್ಷಕರನ್ನು ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಪತ್ರಿಕೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
  • ದೈಹಿಕ ಶಿಕ್ಷಕರು, ಎಐ (AI) ಬೋಧಕರು, ಕನ್ನಡ ಶಿಕ್ಷಕರು ಹಾಗೂ ಕ್ರೀಡಾ ತರಬೇತುದಾರರ ಹುದ್ದೆಗಳಿಗೂ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
  • ಟೀಚಿಂಗ್ ಹುದ್ದೆಗಳಲ್ಲದೆ ವಿಶೇಷ ಅಗತ್ಯವುಳ್ಳ ಮಕ್ಕಳಿಗಾಗಿ ವಿಶೇಷ ಶಿಕ್ಷಕರು (Special Educator) ಮತ್ತು ಶೈಕ್ಷಣಿಕ ಸಲಹೆಗಾರರ (Educational Counsellor) ಹುದ್ದೆಗಳಿಗೂ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. 

indian post office : ತೀರ್ಥಹಳ್ಳಿ ಹಾಗೂ ಶಿವಮೊಗ್ಗ ವ್ಯಾಪ್ತಿಯ ಅಂಚೆ ಕಚೇರಿಗಳ ವಹಿವಾಟು ತಾತ್ಕಾಲಿಕ ಸ್ಥಗಿತ | ಕಾರಣವೇನು

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ದಿನದಂದು ಅಗತ್ಯ ಮೂಲ ದಾಖಲೆಗಳೊಂದಿಗೆ ಶಾಲೆಗೆ ಹಾಜರಾಗಬೇಕಿದ್ದು, ನೇಮಕಾತಿಯ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಹತಾ ಮಾನದಂಡಗಳನ್ನು ತಿಳಿಯಲು ಅಭ್ಯರ್ಥಿಗಳು ಹಾವೇರಿ ಕೇಂದ್ರೀಯ ವಿದ್ಯಾಲಯದ ಅಧಿಕೃತ ಜಾಲತಾಣವಾದ haveri.kvs.ac.in ಗೆ ಭೇಟಿ ನೀಡಿ ಪರಿಶೀಲಿಸಬಹುದಾಗಿದೆ ಎಂದು ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

KV Haveri Recruitment 2026ಹಾವೇರಿ ಕೇಂದ್ರೀಯ ವಿದ್ಯಾಲಯದಲ್ಲಿ 2026-27ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ಶಿಕ್ಷಕರ ನೇಮಕಾತಿ ನಡೆಯಲಿದೆ. ಫೆಬ್ರವರಿ 24 ರಂದು ನಡೆಯುವ ನೇರ ಸಂದರ್ಶನದ ವಿವರ, ಹುದ್ದೆಗಳ ಮಾಹಿತಿ ಹಾಗೂ ಸಮಯದ ಸಂಪೂರ್ಣ ವಿವರ ಇಲ್ಲಿದೆ.
Malenadu Today Shivamogga
KV Haveri Recruitment 2026ಹಾವೇರಿ ಕೇಂದ್ರೀಯ ವಿದ್ಯಾಲಯದಲ್ಲಿ 2026-27ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ಶಿಕ್ಷಕರ ನೇಮಕಾತಿ ನಡೆಯಲಿದೆ. ಫೆಬ್ರವರಿ 24 ರಂದು ನಡೆಯುವ ನೇರ ಸಂದರ್ಶನದ ವಿವರ, ಹುದ್ದೆಗಳ ಮಾಹಿತಿ ಹಾಗೂ ಸಮಯದ ಸಂಪೂರ್ಣ ವಿವರ ಇಲ್ಲಿದೆ.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ