INFORMATION NEWS

ಶಿವಮೊಗ್ಗ: ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ನೇರ ಸಂದರ್ಶನ, ಎಲ್ಲಿ ಯಾವಾಗ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Lab Technician Recruitment ಶಿವಮೊಗ್ಗ,:ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಆಸ್ಪತ್ರೆಯಲ್ಲಿ ಖಾಲಿ ಇರುವ ಪ್ರಯೋಗಶಾಲಾ ತಂತ್ರಜ್ಞರ (Lab Technician) ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲಾ ಆರೋಗ್ಯ ಇಲಾಖೆಯು ಮುಂದಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ (NHM) ಅಡಿಯಲ್ಲಿ ಎನ್.ಪಿ.ಎನ್.ಸಿ.ಡಿ. ಯೋಜನೆಯಡಿ ಒಟ್ಟು 2 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ

ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 17 ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಅಂದು ಬೆಳಿಗ್ಗೆ 11:00 ರಿಂದ ಸಂಜೆ 5:00 ರವರೆಗೆ ಶಿವಮೊಗ್ಗದ ಬಿ.ಹೆಚ್. ರಸ್ತೆಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳ ಮೂಲ ಪ್ರತಿಗಳು ಮತ್ತು ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಿರಬೇಕು 

ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಜೊತೆಗೆ ಪ್ರಯೋಗಶಾಲಾ ತಂತ್ರಜ್ಞರ ತರಬೇತಿ (DMLT) ಪೂರೈಸಿರಬೇಕು. ಇದರೊಂದಿಗೆ ಕನಿಷ್ಠ 2 ವರ್ಷ ಆಸ್ಪತ್ರೆಯಲ್ಲಿ ಕೆಲಸ ಮಾಡಿದ ಅನುಭವವಿರುವುದು ಕಡ್ಡಾಯ. ಕಂಪ್ಯೂಟರ್ ಜ್ಞಾನ, ವಿಶೇಷವಾಗಿ ಡೇಟಾ ಮತ್ತು ವರ್ಡ್ ಪ್ರೊಸೆಸ್ಸಿಂಗ್ ತಿಳಿದಿರುವವರಿಗೆ ಆಯ್ಕೆಯಲ್ಲಿ ಮೊದಲ ಆದ್ಯತೆ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ .

ಸಂಪೂರ್ಣ ನೇಮಕಾತಿ ಪ್ರಕ್ರಿಯೆಯು ಎನ್.ಹೆಚ್.ಎಂ ನಿಯಮಾವಳಿಗಳು ಮತ್ತು ಆಯ್ಕೆ ಸಮಿತಿಯ ಅಂತಿಮ ತೀರ್ಮಾನಕ್ಕೆ ಒಳಪಟ್ಟಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. ಉದ್ಯೋಗಾಕಾಂಕ್ಷಿಗಳು ಈ ಸುವರ್ಣ ಅವಕಾಶವನ್ನು ಬಳಸಿಕೊಳ್ಳುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

Lab Technician Recruitment Walk-in Interview

Lab Technician Recruitment Job Fair KEA Recruitment 2025 job news shivamogga Direct Interview for Health Jobs in Shivamogga
Lab Technician Recruitment
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.