Labour Minister Santosh Lad ಕಾರ್ಮಿಕ ಸಚಿವ ಸಂತೋಷ್ ಲಾಡ್ ಶಿವಮೊಗ್ಗ ಭೇಟಿ : ಯಾವಾಗ, ಕಾರಣವೇನು?
ಶಿವಮೊಗ್ಗ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಆಗಸ್ಟ್ 4 ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದು, ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿರುವ ಸಚಿವರು, ಅಂದು ಬೆಳಿಗ್ಗೆ 9 ಗಂಟೆಗೆ ಸರ್ಕ್ಯೂಟ್ ಹೌಸ್‌ನಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ 9:30ಕ್ಕೆ ನಗರದ ಸಿದ್ದಲೀಪುರದಲ್ಲಿ ನಿರ್ಮಿಸಲಾಗಿರುವ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಬೆಳಿಗ್ಗೆ 10:30ಕ್ಕೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಅಲ್ಲಿಂದ 11:30ಕ್ಕೆ ಗಾಡಿಕೊಪ್ಪದ ಲಗನಾ ಮಂದಿರದಲ್ಲಿ ಶಿವಮೊಗ್ಗ ಜಿಲ್ಲೆಯ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಭದ್ರಾವತಿಗೆ ತೆರಳಲಿರುವ ಸಚಿವರು, ಉಜ್ಜನಿಪುರ ಬೈಪಾಸ್ ರಸ್ತೆಯಲ್ಲಿರುವ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಸಮುದಾಯ ಭವನವನ್ನು ಉದ್ಘಾಟಿಸಲಿದ್ದಾರೆ. ನಂತರ ಸಂಜೆ 5 ಗಂಟೆಗೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.