ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಜನವಸತಿ ಪ್ರದೇಶದಲ್ಲೆ ಚಿರತೆ ಹಾವಳಿ

ಘಟನೆ ಸ್ಥಳೀಯರಲ್ಲಿ ಆತಂಕ ಮೂಡುವಂತೆ ಮಾಡಿದೆ. ಇತ್ತೀಚೆಗೆ ಈ ಸಂಬಂಧ ಅರಣ್ಯ ಇಲಾಖೆ ಸ್ಥಳಕ್ಕೆ ಬಂದು ಚಿರತೆ ಹಿಡಿಯುವ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಜನವಸತಿ ಪ್ರದೇಶದಲ್ಲೆ ಚಿರತೆ ಹಾವಳಿ
ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ಚಿರತೆ ಪ್ರತ್ಯಕ್ಷ
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ. ಕಳೆದ ಕೆಲವೇ ದಿನಗಳಲ್ಲಿ ಪದೇ ಪದೇ ಚಿರತೆ ಕಾಣಿಸಿಕೊಳ್ತಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡುವಂತೆ ಮಾಡಿದೆ. ಇತ್ತೀಚೆಗೆ ಈ ಸಂಬಂಧ ಅರಣ್ಯ ಇಲಾಖೆ ಸ್ಥಳಕ್ಕೆ ಬಂದು ಚಿರತೆ ಹಿಡಿಯುವ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಏನಾಯ್ತು? 

ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿನ ಬಸವರಾಜ್​ ಎಂಬವರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಆನಂತರ ಚಿರತೆ ಸ್ಥಳೀಯರ ತೋಟಗಳಲ್ಲಿ ಓಡಾಡ್ತಿರುವುದು ಕಾಣಿಸಿದೆ. ಚಿರತೆ ಕಾಣಿಸುವುದು ಹೊಸ ವಿಷಯವೇನಲ್ಲವಾದರೂ, ಅದರು ಜನ ಜಾನುವಾರು ಓಡಾಡುವ ಸ್ಥಳಗಳಲ್ಲಿ  ತಿರುಗಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. 
ಇನ್ನೂ ವಿಷಯ ತಿಳಿದು ಸ್ಥಳಕ್ಕೆ ಬಂದಿರುವ ಅರಣ್ಯ ಸಿಬ್ಬಂದಿ ಚಿರತೆಯನ್ನು ಸೆರೆ ಹಿಡಿಯಲು ಮುಂದಾಗಿದ್ದಾರೆ. ಈ ಸಂಬಂಧ ಬೋನನ್ನ ಇಡಲಾಗಿದೆ.