ಶಿರಾಳಕೊಪ್ಪ, ಉರುಳಿಗೆ ಸಿಲುಕಿ ಚಿರತೆ ಸಾವು

prathapa thirthahalli
Prathapa thirthahalli - content producer

ಶಿರಾಳಕೊಪ್ಪ: ತಾಳಗುಂದ ರಾಜ್ಯ ಅರಣ್ಯದ ಅಂಚಿನಲ್ಲಿ ಕಾಡುಪ್ರಾಣಿಗಳನ್ನು ಹಿಡಿಯಲು ಹಾಕಲಾಗಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಸದ್ಯ ಟ್ರೆಂಡ್​ನಲ್ಲಿದ್ದಾರೆ 73ರ ಬಾಡಿಬಿಲ್ಡರ್​ ರಾಮಪ್ಪ! ವಯಸ್ಸಿಗೆ ಸೆಡ್ಡು ಹೊಡೆದ ಇವರ ಕಥೆ ಗೊತ್ತಾ! ಇವರು ಶಿವಮೊಗ್ಗದವರು!

Leopard Dies in Snare Near Talagunda Forest 
Leopard Dies in Snare Near Talagunda Forest

ಶಿಕಾರಿಪುರ ತಾಲ್ಲೂಕಿನ ತಾಳಗುಂದ ರಾಜ್ಯ ಅರಣ್ಯ ಪ್ರದೇಶದ ಖಾಸಗಿ ಜಮೀನಿನ ಅಂಚಿನಲ್ಲಿ ಕಾಡಿನೊಳಗೆ ಹಾದುಹೋಗುವ ದಾರಿಯಲ್ಲಿ ಈ ಉರುಳನ್ನು ಹಾಕಲಾಗಿದೆ ಎನ್ನಲಾಗಿದೆ.  ಸ್ಥಳೀಯರು ಅರಣ್ಯದಂಚಿನಲ್ಲಿ ಉರುಳಿಗೆ ಸಿಲುಕಿ ಮೃತಪಟ್ಟಿರುವ ಚಿರತೆಯ ಕೊಳೆತ ದೇಹವನ್ನು ಗಮನಿಸಿದ್ದಾರೆ. ಕೂಡಲೇ ಅವರು ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸುದ್ದಿ ತಿಳಿಯುತ್ತಿದ್ದಂತೆ ವಲಯ ಅರಣ್ಯಾಧಿಕಾರಿ (RFO) ಜಾವೀದ್ ಅವರು ತಮ್ಮ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Leopard Dies in Snare Near Talagunda Forest 

Leopard Dies in Snare Near Talagunda Forest 

Share This Article