ಶಿವಮೊಗ್ಗ: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ  ಕೈದಿ ಸಾವು

prathapa thirthahalli
Prathapa thirthahalli - content producer

ಶಿವಮೊಗ್ಗ : ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿಯೊಬ್ಬರು ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಮೃತರನ್ನು ಹೊಸನಗರ ತಾಲೂಕಿನ ಗರ್ತಿಕೆರೆ ನಿವಾಸಿ ಕೃಷ್ಣ (44), ತಂದೆ ಸೀನ ಎಂದು ಗುರುತಿಸಲಾಗಿದೆ.

Life Convict Dies at Shivamogga Central Jail
Life Convict Dies at Shivamogga Central Jail

ಶಿವಮೊಗ್ಗಕ್ಕೆ ಬರ್ತಿದ್ದಾರೆ  ಮಳೆ ಹುಡುಗಿ ಪೂಜಾ ಗಾಂಧಿ, ಯಾವಾಗ, ಏಕೆ ಗೊತ್ತಾ

ಕೃಷ್ಣ ಅವರು ಶಿವಮೊಗ್ಗ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಶಿಕ್ಷಾ ಬಂದಿ ಸಂಖ್ಯೆ 01871 ರ ಅಡಿಯಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಶಿವಮೊಗ್ಗ ಪೀಠ ಸಾಗರ, ಇವರ ಆದೇಶದನ್ವಯ 29-04-2025 ರಂದು ಇವರನ್ನು ವಿಚಾರಣಾ ವಿಭಾಗದಿಂದ ಶಿಕ್ಷಾ ವಿಭಾಗಕ್ಕೆ ವರ್ಗಾಯಿಸಲಾಗಿತ್ತು.

ಕೃಷ್ಣ ಅವರು ದೀರ್ಘಕಾಲದಿಂದ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದರು ಮತ್ತು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ, ಡಿಸೆಂಬರ್ 5, 2025 ರಂದು ಸಂಜೆ 4:55 ಗಂಟೆಗೆ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ತುರ್ತು ಚಿಕಿತ್ಸೆಗಾಗಿ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ, ಶಿವಮೊಗ್ಗಕ್ಕೆ ದಾಖಲಿಸಲಾಗಿತ್ತು. ಅಲ್ಲಿನ ವೈದ್ಯರು ಅವರನ್ನು ಒಳರೋಗಿಯಾಗಿ ದಾಖಲಿಸಿಕೊಂಡು ಚಿಕಿತ್ಸೆಯನ್ನು ಮುಂದುವರೆಸಿದ್ದರು. ಆದಾಗ್ಯೂ, ಚಿಕಿತ್ಸೆಗೆ ಸ್ಪಂದಿಸದೆ, ಕೃಷ್ಣ ಅವರು ಇಂದು ಬೆಳಗಿನ ಜಾವ 02:00 ಗಂಟೆಗೆ ಮೃತಪಟ್ಟಿರುವುದಾಗಿ ಮೆಗ್ಗಾನ್ ಆಸ್ಪತ್ರೆಯ ವೈದ್ಯಾಧಿಕಾರಿಗಳ ತಿಳಿಸಿದ್ದಾರೆ.

Life Convict Dies at Shivamogga Central Jail

Life Convict Dies at Shivamogga Central Jail
Life Convict Dies at Shivamogga Central Jail
Share This Article