SHIVAMOGGA NEWS TODAY

28 ವರ್ಷದ ಯುವಕ ಸೇರಿದಂತೆ ಇಬ್ಬರಿಗೆ ಜೀವವಾಧಿ ಶಿಕ್ಷೆ ವಿಧಿಸಿದ ಕೋರ್ಟ್​, ಅವರು ಮಾಡಿದ್ದೇನು ಗೊತ್ತಾ.

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಜಮೀನು ವಿಚಾರಕ್ಕಾಗಿ ನಡೆದ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಇಬ್ಬರು ಆರೋಪಿಗಳಿಗೆ ಶಿವಮೊಗ್ಗದ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ತಾಳಗುಪ್ಪ-ಕೆಎಸ್‌ಆರ್, ಶಿವಮೊಗ್ಗ ತುಮಕೂರು ಟ್ರೈನ್ ಸೇರಿದಂತೆ 2 ದಿನ 20 ಕ್ಕೂ ಹೆಚ್ಚು ರೈಲು ಸಂಚಾರದಲ್ಲಿ ಬದಲಾವಣೆ

Life Imprisonment ಪ್ರಕರಣದ ಹಿನ್ನೆಲೆ

ಬೆಳಲಕಟ್ಟೆ ಗ್ರಾಮದ ಮಹೇಶಪ್ಪ ಹಾಗೂ ಆರೋಪಿಗಳಾದ ಕುಮಾರ್ (57) ಮತ್ತು ಕಾರ್ತಿಕ್ (28) ನಡುವೆ ಜಮೀನಿನ ವಿಚಾರದಲ್ಲಿ ಹಗೆತನವಿತ್ತು. ಈ ದ್ವೇಷದ ಹಿನ್ನೆಲೆಯಲ್ಲಿ, ಡಿಸೆಂಬರ್ 3, 2023 ರಂದು ಮಹೇಶಪ್ಪ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪಿಗಳು ಮತ್ತೋಡು ಹನಸವಾಡಿ ಸರ್ಕಲ್ ಬಳಿ ಹೊಂಚು ಹಾಕಿದ್ದರು. ಮಹೇಶಪ್ಪ ಅವರು ಸ್ಕೂಟಿಯಲ್ಲಿ ಬರುತ್ತಿದ್ದಾಗ ತಡೆದು, ಅವರ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದರು ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿಯಾಗಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಸತ್ಯನಾರಾಯಣ ವೈ. ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್​​ ಶೀಟ್​ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಬಿ.ಎಸ್. ಮಮತಾ ಅವರು ವಾದ ಮಂಡಿಸಿದ್ದರು

ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆದಿದ್ದು, ಆರೋಪಿಗಳ ಮೇಲಿನ ಸಾಕ್ಷ್ಯಾಧಾರಗಳು ದೃಢಪಟ್ಟಿವೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಅಭಯ್ ಧನಪಾಲ್ ಚೌಗಲ ಅವರು ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಒಟ್ಟು 57,000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

Life Imprisonment for Two in Shimoga Murder Case


Life Imprisonment for Two in Shimoga Murder Case

Life Imprisonment for Two in Shimoga Murder Case

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.