ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, ಸೆಪ್ಟೆಂಬರ್ 4 2025 : ಶಿವಮೊಗ್ಗ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಅವರು ಇವತ್ತು ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ, ಸೆಪ್ಟೆಂಬರ್ 12ರವರೆಗೆ ಸಂಚಾರ ಇ-ಚಲನ್ ದಂಡಗಳ ಮೇಲೆ ಶೇ. 50 ರಷ್ಟು ರಿಯಾಯಿತಿ ಪಡೆಯುವ ಅವಕಾಶವಿದ್ದು, ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

₹63,22,750 ಸಂಗ್ರಹ
ಪೊಲೀಸ್ ಇಲಾಖೆಯ ಅಂಕಿಅಂಶಗಳ ಪ್ರಕಾರ, ಆಗಸ್ಟ್ 23 ರಿಂದ ಸೆಪ್ಟೆಂಬರ್ 2 ರವರೆಗೆ 15,465 ಇ-ಚಲನ್‌ಗಳನ್ನು ದಂಡಪಾವತಿ ಮೂಲಕ ಮುಕ್ತಾಯಗೊಳಿಸಲಾಗಿದೆ. ಇದರ ಒಟ್ಟು ಮೊತ್ತ ₹63,22,750 ಆಗಿದೆ.‘
ರಾಷ್ಟ್ರೀಯ ಲೋಕ್ ಅದಾಲತ್
ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಸೆಪ್ಟೆಂಬರ್ 13ರಂದು 3ನೇ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ಈ ದಿನದಂದು (Opportunity), ವೈವಾಹಿಕ ವಿವಾದ, ಅಪಘಾತ ಪರಿಹಾರ ವ್ಯಾಜ್ಯ, ಚೆಕ್ ಅಮಾನ್ಯ ಪ್ರಕರಣ, ಕ್ರಿಮಿನಲ್ ಪ್ರಕರಣ, ಸಾಲ ಮತ್ತು ಆಸ್ತಿ ವಿಭಾಗದ ದಾವೆ ಸೇರಿದಂತೆ ವಿವಿಧ ರೀತಿಯ ಪ್ರಕರಣ ನ್ಯಾಯಾಧೀಶರು ಹಾಗೂ ಸಂಧಾನಕಾರರ ಸಮ್ಮುಖದಲ್ಲಿ ಇತ್ಯರ್ಥಪಡಿಸಲಾಗುವುದು. ಕಳೆದ ಲೋಕ್ ಅದಾಲತ್‌ನಲ್ಲಿ ₹30.5 ಕೋಟಿಗೂ ಹೆಚ್ಚು ಮೊತ್ತದ 14,225 ಪ್ರಕರಣಗಳು ಯಶಸ್ವಿಯಾಗಿ ಇತ್ಯರ್ಥಗೊಂಡಿರುವುದು ಗಮನಾರ್ಹ ಎಂದು ಮಾಹಿತಿ ನೀಡಿದರು.
Lok Adalat and other legal services in shivamogga district court
ಮಧ್ಯಸ್ಥಿಕೆ ಅಭಿಯಾನ ಹಾಗೂ ಉಚಿತ ಕಾನೂನು ಸಹಾಯವಾಣಿ೩
ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಿಗಾಗಿ 90 ದಿನಗಳ ಮಧ್ಯಸ್ಥಿಕೆ ಅಭಿಯಾನವನ್ನು ಜುಲೈ 1 ರಿಂದ ಸೆಪ್ಟೆಂಬರ್ 30 ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದ (Campaign) ಮೂಲಕ, ತ್ವರಿತವಾಗಿ ನ್ಯಾಯಯುತ ಪರಿಹಾರ ಪಡೆಯಲು ವಕೀಲರ ಮೂಲಕ ಅಥವಾ ನೇರವಾಗಿ ಮನವಿ ಸಲ್ಲಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಇಲ್ಲಿಯವರೆಗೆ, 1,420 ಪ್ರಕರಣಗಳನ್ನು ಗುರುತಿಸಲಾಗಿದ್ದು, 112 ಪ್ರಕರಣಗಳನ್ನು ಯಶಸ್ವಿಯಾಗಿ ಇತ್ಯರ್ಥಪಡಿಸಲಾಗಿದೆ.
ಇದೇ ವೇಳೆ, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯ ಮೇರೆಗೆ, ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಉಚಿತ ಕಾನೂನು ಸಲಹೆಗಾಗಿ ಸಹಾಯವಾಣಿ ಸಂಖ್ಯೆ 15100 ಅನ್ನು ಆರಂಭಿಸಿದೆ. ಸಾರ್ವಜನಿಕರು ತಮ್ಮ ಅಗತ್ಯಗಳಿಗೆ ಈ ಸಹಾಯವಾಣಿಯನ್ನು ಸಂಪರ್ಕಿಸಬಹುದಾಗಿದೆ.
ಖಾಯಂ ಲೋಕ್ ಅದಾಲತ್ ಬಗ್ಗೆ ಜಾಗೃತಿ / legal services
ಬ್ಯಾಂಕುಗಳು, ವಿಮಾ ಕಂಪನಿಗಳು, ಸ್ಥಳೀಯ ಸಂಸ್ಥೆಗಳು, ಮತ್ತು ಸಾರ್ವಜನಿಕ ಸೇವಾ ವಲಯದ ಅಧಿಕಾರಿಗಳಿಗೆ ಖಾಯಂ ಲೋಕ್ ಅದಾಲತ್ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ವಿಶೇಷ ನ್ಯಾಯಾಲಯದಲ್ಲಿ ಯಾವುದೇ ಶುಲ್ಕ ಅಥವಾ ಆದಾಯ ಮಿತಿಯಿಲ್ಲದೆ ಬ್ಯಾಂಕಿಂಗ್, ವಿಮೆ, ಸಾರಿಗೆ, ಶಿಕ್ಷಣ ಮತ್ತು ವಸತಿ ಸಂಬಂಧಿತ ಪ್ರಕರಣಗಳನ್ನು ಇತ್ಯರ್ಥಪಡಿಸಬಹುದು. ಸದ್ಯಕ್ಕೆ ಮಂಗಳೂರಿನಲ್ಲಿ ಇದರ ಪೀಠವಿದ್ದು, ಮುಂದಿನ ದಿನಗಳಲ್ಲಿ ಶಿವಮೊಗ್ಗದಲ್ಲಿಯೂ ಇದರ ಸೇವೆ ಲಭ್ಯವಾಗಲಿದೆ ಎಂದು ತಿಳಿಸಿದರು. ಈ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್. ಉಪಸ್ಥಿತರಿದ್ದರು.
Lok Adalat and other legal services in shivamogga district court.

traffic fine discount Karnataka, Lok Adalat Shivamogga, legal aid helpline 15100, permanent Lok Adalat, e-challan discount Shivamogga, pay traffic fine online Karnataka, Lok Adalat case settlement, Lok Adalat Shivamogga, Shivamogga District Court, e-challan fine payment, 15100 helpline, ಸಂಚಾರ ದಂಡ, ಇ-ಚಲನ್, ಲೋಕ್ ಅದಾಲತ್, ಶಿವಮೊಗ್ಗ, ಕಾನೂನು ಸೇವೆಗಳು, 50% ರಿಯಾಯಿತಿ, ಉಚಿತ ಸಹಾಯವಾಣಿ, ಸಂಧಾನ.