ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಮುಂಜಾನೆಯೇ ಲೋಕಾಯುಕ್ತ ಅಧಿಕಾರಿಗಳು ಅಧಿಕಾರಿಯೊಬ್ಬರ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದರು’

ಇಂದು ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಆಗಿರುವ ರೂಪ್ಲಾ ನಾಯ್ಕ್ ಅವರ ಮನೆ ಹಾಗೂ ಕಚೇರಿಯ ಮೇಲೆ ದಾಳಿ ನಡೆಸಿದರು. ಕೇವಲ ಶಿವಮೊಗ್ಗ ಮಾತ್ರವಲ್ಲದೆ, ಬೆಂಗಳೂರಿನಲ್ಲಿರುವ ಇವರ ಕುಟುಂಬದ ನಿವಾಸ ಹಾಗೂ ರೂಪ್ಲಾ ನಾಯ್ಕ್ ಅವರ ಆಪ್ತ ಸಹಾಯಕ ತಾಂಬೆ ಅವರಿಗೆ ಸೇರಿದ ವಿದ್ಯಾನಗರದ ಮನೆಯ ಮೇಲೂ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಜಾಲಾಡುತ್ತಿದ್ದಾರೆ.
ನಂತರ ಲೋಕಾಯುಕ್ತ ಪೊಲೀಸರ ಆರು ಪ್ರತ್ಯೇಕ ತಂಡಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ನಂತರ ಶಿಮೊಗ್ಗದ ಆರ್ ಟಿ ಓ ರಸ್ತೆಯಲ್ಲಿರುವ ಶಿವಮೊಗ್ಗ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಕಚೇರಿ ಮೇಲೆಯೂ ದಾಳಿ ನಡೆಸಿದ್ದು ಸುಮಾರು 2 ಗಂಟೆಗಳ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಈ ಕುರಿತಾದ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Lokayukta Raid in Shivamogga Engineer Assets Under Investigation