SHIVAMOGGA NEWS TODAY

ಶಿವಮೊಗ್ಗದ ವಿವಿಧೆಡೆ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ!

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್. ಅವರಿಗೆ ಸಂಬಂಧಿಸಿದ ವಿವಿಧ ಆಸ್ತಿಪಾಸ್ತಿಗಳ ಮೇಲೆ ಇಂದು ಬೆಳ್ಳಂಬೆಳಗ್ಗೆಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ ಎನ್ನಲಾಗುತ್ತಿದೆ.

ಶಿವಮೊಗ್ಗ : ಗ್ಯಾಸ್ ಟ್ರಬಲ್ ನಡುವೆ ಸಿಲಿಂಡರ್ ಕಳ್ಳತನ 

ಜಿಲ್ಲೆಯ ಶಿವಮೊಗ್ಗ ನಗರ, ಶಿಕಾರಿಪುರ ಹಾಗೂ ಸಾಗರ ಸೇರಿದಂತೆ ಒಟ್ಟು ಐದು ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ತಂಡಗಳು ಪರಿಶೀಲನೆ ಆರಂಭಿಸಿವೆ. ಶಿಕಾರಿಪುರದ ಚೆನ್ನಕೇಶವ ನಗರದಲ್ಲಿರುವ ಶೋಭಾ ಅವರ ಸ್ವಗೃಹ ಹಾಗೂ ಸಾಗರ ತಾಲೂಕಿನ ಅಚಾಪುರ ಸಮೀಪದ ನಿವಾಸದಲ್ಲಿ ಅಧಿಕಾರಿಗಳ ತಂಡ ದಾಖಲೆಗಳನ್ನು ಜಾಲಾಡುತ್ತಿದೆ.

ಅಧಿಕಾರಿ ಶೋಭಾ ಅವರಷ್ಟೇ ಅಲ್ಲದೆ, ಅವರ ಆಪ್ತ ಸಹಾಯಕನ ನಿವಾಸದ ಮೇಲೆಯೂ ಲೋಕಾಯುಕ್ತರು ದಾಳಿ ನಡೆಸಿರುವುದು ಕಂಡುಬಂದಿದೆ. ದಾವಣಗೆರೆ ಲೋಕಾಯುಕ್ತ ಎಸ್ಪಿಯವರ ಮಾರ್ಗದರ್ಶನದಲ್ಲಿ ಈ ಬೃಹತ್ ಕಾರ್ಯಾಚರಣೆ ನಡೆಯುತ್ತಿದ್ದು, ತನಿಖಾ ತಂಡವು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಳ್ಳುತ್ತಿದೆ. 

ಈ ಮಹತ್ವದ ಕಾರ್ಯಾಚರಣೆಯಲ್ಲಿ ಶಿವಮೊಗ್ಗ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳ ಲೋಕಾಯುಕ್ತ ಅಧಿಕಾರಿಗಳನ್ನೊಳಗೊಂಡ ಐದು ಪ್ರತ್ಯೇಕ ತಂಡಗಳು ಪಾಲ್ಗೊಂಡಿವೆ. ಸದ್ಯ ದಾಳಿ ಮುಂದುವರಿದಿದ್ದು, ಆಸ್ತಿಪಾಸ್ತಿಯ ನಿಖರ ವಿವರಗಳು ತನಿಖೆಯ ನಂತರವಷ್ಟೇ ಹೊರಬೀಳಬೇಕಿದೆ.

Lokayukta Raid on BCM Officer in Shivamogga

Lokayukta Raid on BCM Officer in Shivamogga
Lokayukta Raid on BCM Officer in Shivamogga
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.