ಶಿಮೂಲ್ ಮೇಲೆ ಲೋಕಾಯುಕ್ತ ದಾಳಿ

ಹಂಚಿಕೊಳ್ಳಿ
WhatsApp Facebook X Telegram
Shimoga
Shimoga

ಶಿವಮೊಗ್ಗ  : ಶಿವಮೊಗ್ಗ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (SHIMUL) ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ.

ಲೋಕಾಯುಕ್ತರ ತಂಡವು ಶಿಮೂಲ್ ಕಚೇರಿಯ ಲೆಕ್ಕಪತ್ರ ವಿಭಾಗ ಮತ್ತು ಮಾರುಕಟ್ಟೆ ವಿಭಾಗಗಳ ಮೇಲೆ ಗಮನ ಕೇಂದ್ರೀಕರಿಸಿದೆ. ಕಳೆದ ಕೆಲವು ಸಮಯದಿಂದ ಈ ಎರಡೂ ವಿಭಾಗಗಳಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ದೂರುಗಳ ಹಿನ್ನೆಲೆಯಲ್ಲಿ ಸಕಲ ದಾಖಲೆಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Lokayukta Raid on SHIMUL shivamogga

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor