ಅಡ್ಡಗಟ್ಟಿದವರ ಮೇಲೆ ಹತ್ತಿಸಲು ಬಂದ ಲಾರಿ | ವಾಸನೆ ಮೂಡಿಸಿದ ಸಂಶಯದಿಂದ ಹೊರಬಿತ್ತು ಈ ಸತ್ಯ
lorry containing animal waste was seized by police near Kudli Cross, Holehonnur.
SHIVAMOGGA | MALENADUTODAY NEWS | Jun 15, 2024 ಮಲೆನಾಡು ಟುಡೆ
ಹೊಳೆಹೊನ್ನೂರು ಸಮೀಪದ ಕೂಡ್ಲಿ ಕ್ರಾಸ್ ಬಳಿ ದನದ ಮಾಂಸದ ತ್ಯಾಜ್ಯ ತುಂಬಿದ ಲಾರಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಸಂಚರಿಸುವ ಲಾರಿ ಲೋಡಿನಿಂದ ಕೆಟ್ಟ ವಾಸನೆ ಬರುವುದನ್ನು ಗಮನಿಸಿದ ಯುವಕರಿಬ್ಬರು ಲಾರಿಯನ್ನು ಬೆನ್ನಟಿ ಹಿಡಿಯಲು ಮುಂದಾಗಿದ್ದಾರೆ. ಈ ವೇಳೆ ಚಾಲಕ ಲಾರಿಯನ್ನ ಬೈಕ್ ಸವಾರರ ಮೇಲೆ ಹತ್ತಿಸಲು ಪ್ರಯತ್ನ ಪಟ್ಟಿದ್ದಾರೆ ಎನ್ನಲಾಗಿದೆ. ಆ ಬಳಿಕ ಯುವಕರು ಲಾರಿಯನ್ನು ರಸ್ತೆಯಲ್ಲೆ ತಡೆದು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಷ್ಟೊತ್ತಿಗೆ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ವೇಳೆ ಪರಿಶೀಲನೆ ನಡೆಸಿದಾಗ ಲಾರಿಯಲ್ಲಿ ದನದ ತ್ಯಾಜ್ಯ ಇರುವುದು ಗೊತ್ತಾಗಿದೆ. ಅಲ್ಲದೆ ಸುದ್ದಿ ಹರಡಿ ಕೂಡ್ಲಿ ಕ್ರಾಸ್‌ನಲ್ಲಿ ಜನ ಜಂಗುಳಿ ಉಂಟಾಗಿದೆ. ಪಕ್ಕದ ಚನ್ನಗಿರಿಯ ಕಸಾಯಿ ಖಾನೆಗಳಿಂದ ದನದ ಮಾಂಸದ ಕೊಂಬು ಮೂಳೆಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಕೊಂಡು ಲಾರಿಯು ಮಂಗಳೂರು ಮೂಲದ ಸಂಸ್ಕರಣಾ ಘಟಕಕ್ಕೆ ಹೋಗುತ್ತಿತ್ತು ಎನ್ನಲಾಗಿದೆ. ಇದನ್ನ ರಾಸಾಯನಿಕಗಳಿಗೆ ಬಳಸುವ ಸಲುವಾಗಿ ಸಾಗಿಸಲಾಗುತ್ತಿತ್ತು ಎಂದು ಪ್ರಾಥಮಿಕ ಹಂತದಲ್ಲಿ ಮಾಹಿತಿ ಲಭ್ಯವಾಗಿತ್ತು.
A lorry containing animal waste was seized by police near Kudli Cross, Holehonnur. cattle waste in plastic bags from slaughterhouses in Channagiri to a processing unit in Mangaluru