ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025, ಹಾಸನ: ಜಿಲ್ಲೆಯ ಮೊಸಳೆ ಹೊಸಹಳ್ಳಿಯಲ್ಲಿ ನಿನ್ನೆ ರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಗಣಪತಿ ಮೆರವಣಿಗೆ ಮೇಲೆ ಕ್ಯಾಂಟರ್ ಲಾರಿಯೊಂದು ನುಗ್ಗಿದ್ದರಿಂದ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ (Tragedy)
Lorry Hits Ganesha Procession in Hassan
View this post on Instagram
ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಈ ದುರಂತ ಸಂಭವಿಸಿದೆ. ಒಂದು ಕಡೆಯಲ್ಲಿ ಗಣಪತಿ ಮೆರವಣಿಗೆ ಸಾಗುತ್ತಿದ್ದಾಗ, ಇನ್ನೊಂದು ಬದಿಯಲ್ಲಿದ್ದ ಕ್ಯಾಂಟರ್ಗೆ ಬೈಕ್ವೊಂದು ಅಡ್ಡ ಬಂದಿದೆ. ಬೈಕ್ಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸುವ ವೇಳೆ ಕ್ಯಾಂಟರ್ ಸಂಪೂರ್ಣ ನಿಯಂತ್ರಣ ತಪ್ಪಿ ಡಿವೈಡರ್ ಎಗರಿ ಮೆರವಣಿಗೆಯ ಮೇಲೆ ನುಗ್ಗಿದೆ. ಮೆರವಣಿಗೆಯಲ್ಲಿದ್ದ ಜನರ ಮೇಲೆ ಕ್ಯಾಂಟರ್ ಹರಿದು ದುರಂತ ಸಂಭವಿಸಿದೆ.

ಗಾಯಗೊಂಡವರನ್ನು ತಕ್ಷಣವೇ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಘಟನೆಯಲ್ಲಿ ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇನ್ನೂ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸ್ತಿದ್ದಾರೆ.
Lorry Hits Ganesha Procession in Hassan
ಹಾಸನ: ತಾಲೂಕಿನ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಗಣಪತಿ ಮೆರವಣಿಗೆ ಮೇಲೆ ನುಗ್ಗಿದ ಲಾರಿಗೆ ಬಲಿಯಾದವರ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು, ಅವರಲ್ಲಿ ಐವರು ಗ್ರಾಮದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ.
ಮೃತರ ವಿವರ
- ಪ್ರವೀಣ್ ಕುಮಾರ್, ಅಂತಿಮ ಬಿಇ ವಿದ್ಯಾರ್ಥಿ, ಬಳ್ಳಾರಿ
- ರಾಜೇಶ (17) ಕೆ.ಬಿ.ಪಾಳ್ಯ, ಹಳೆಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು
- ಈಶ್ವರ (17) ಡನಾಯಕನಹಳ್ಳಿ ಕೊಪ್ಪಲು, ಹೊಳೆನರಸೀಪುರ ತಾಲ್ಲೂಕು
- ಗೋಕುಲ (17) ಮುತ್ತಿಗೆಹೀರಳ್ಳಿ ಗ್ರಾಮ, ಹೊಳೆನರಸೀಪುರ ತಾಲ್ಲೂಕು
- ಕುಮಾರ (25) ಕಬ್ಬಿನಹಳ್ಳಿ ಗ್ರಾಮ, ಹಳೇಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು.
- ಪ್ರವೀಣ (25) ಕಬ್ಬಿನಹಳ್ಳಿ ಗ್ರಾಮ ಹಳೇಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು.
- ಮಿಥುನ್ (23) ಗವಿಗಂಗಾಪುರ ಗ್ರಾಮ, ಹೊಸದುರ್ಗ ತಾಲೂಕು ಚಿತ್ರದುರ್ಗ ಜಿಲ್ಲೆ.
- ಸುರೇಶ ಬಿಇ ವಿದ್ಯಾರ್ಥಿ ಮಣೆನಹಳ್ಳಿ ಮರ್ಲೆ ಗ್ರಾಮ, ಚಿಕ್ಕಮಗಳೂರು ಜಿಲ್ಲೆ
- ಪ್ರಭಾಕರ್ (55) ಬಂಟರಹಳ್ಳಿ, ಹಾಸನ ತಾಲ್ಲೂಕು
ಹಾಸನ, ಗಣೇಶ ವಿಸರ್ಜನೆ, ಮೆರವಣಿಗೆ, ಅಪಘಾತ, ಕ್ಯಾಂಟರ್ ಲಾರಿ, ಸಾವಿನ ಸಂಖ್ಯೆ, ಗಾಯಾಳುಗಳು, ಶ್ರೇಯಸ್ ಪಟೇಲ್, ಎಚ್.ಡಿ. ರೇವಣ್ಣ, Hassan, Ganesha Procession, Accident, Lorry, Canter, Death Toll, Injuries, #ಹಾಸನ_ದುರಂತ, #ಗಣೇಶವಿಸರ್ಜನೆ ,#ಮೆರವಣಿಗೆ_ಅಪಘಾತ #ಹಾಸನಅಪಘಾತ ,#ದುರಂತಘಟನೆ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ , Lorry Hits Ganesha Procession in Hassan
Lorry Hits Ganesha Procession in Hassan