ಆನಂದಪುರ: ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ಸ್ಥಳಕ್ಕೆ ಶಾಸಕ ಬೇಳೂರು ಭೇಟಿ

ಹಂಚಿಕೊಳ್ಳಿ
WhatsApp Facebook X Telegram
Lorry Overturns Near sagara Anandapura
Lorry Overturns Near sagara Anandapura

Lorry Overturns ಸಾಗರ: ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ಗ್ರಾಮದ ತಿರುವಿನಲ್ಲಿ ಅಡಿಕೆ ಸಸಿಗಳನ್ನು ಹೊತ್ತೊಯ್ಯುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ನಡೆದಿದೆ. ಅದೃಷ್ಟವಶಾತ್ ಚಾಲಕ ಹಾಗೂ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶಿವಮೊಗ್ಗ: ತಾಳಗುಪ್ಪ ಹುಬ್ಬಳ್ಳಿ ರೈಲು ಮಾರ್ಗ ಬಗ್ಗೆ ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದೇನು

ಘಟನೆಯ ವಿವರ:

ಇಂದು ಮಧ್ಯಾಹ್ನ ಸುಮಾರು 1:00 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಲಾರಿಯು ಕಾಸ್ಪಾಡಿಯಿಂದ ಮಾಸೂರಿಗೆ ಅಡಿಕೆ ಸಸಿಗಳನ್ನು ಲೋಡ್ ಮಾಡಿಕೊಂಡು ತೆರಳುತ್ತಿತ್ತು. ಐಗಿನಬೈಲು ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ರಸ್ತೆಯಲ್ಲೇ ಉರುಳಿ ಬಿದ್ದಿದೆ. ಪರಿಣಾಮ ರಸ್ತೆಯಲ್ಲಿ ಅಡಿಕೆ ಸಸಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು

ಸ್ಥಳಕ್ಕೆ ಭೇಟಿ ನೀಡಿದ ಶಾಸಕರು

ಅದೇ ಮಾರ್ಗವಾಗಿ ಅನ್ಯ ಕೆಲಸದ ನಿಮಿತ್ತ ತೆರಳುತ್ತಿದ್ದ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಅಪಘಾತ ಕಂಡ ತಕ್ಷಣ ತಮ್ಮ ವಾಹನ ನಿಲ್ಲಿಸಿ ಸ್ಥಳಕ್ಕೆ ಧಾವಿಸಿದರು. ಸಂಕಷ್ಟದಲ್ಲಿದ್ದವರ ನೆರವಿಗೆ ಮುಂದಾದ ಶಾಸಕರು, ಗಾಯಾಳುಗಳ ಆರೋಗ್ಯ ವಿಚಾರಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ಅಲ್ಲದೆ, ರಸ್ತೆಯಲ್ಲಿ ಪಲ್ಟಿಯಾಗಿದ್ದ ಲಾರಿಯನ್ನು ಕೂಡಲೇ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿ ಮಾನವೀಯತೆ ಮೆರೆದರು.

Lorry Overturns Near sagara Anandapura

Lorry Overturns Near sagara Anandapura
Lorry Overturns Near sagara Anandapura
shivamogga car decor sun control house
shivamogga car decor sun control house

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor