ಶಿವಮೊಗ್ಗ: ಇರಾನ್ ಮತ್ತು ಇಸ್ರೇಲ್ ದೇಶಗಳ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಉಂಟಾಗಿರುವ ಗ್ಯಾಸ್ ಸಿಲಿಂಡರ್ ಅಭಾವದ ಬಿಸಿ ಈಗ ವಿದ್ಯಾರ್ಥಿ ನಿಲಯಗಳು ಮತ್ತು ಆಸ್ಪತ್ರೆಗಳಿಗೆ ತಟ್ಟುತ್ತಿದೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಸಕಾಲಕ್ಕೆ ಗ್ಯಾಸ್ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎನ್‌ಎಸ್‌ಯುಐ ಪದಾಧಿಕಾರಿಗಳು ಇಂದು ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಶಿವಮೊಗ್ಗ : ಮಹಿಳಾ ಕಲಾವಿದರಿಗೆ ಇಲ್ಲಿದೆ ನೋಡಿ ಸುವರ್ಣಾವಕಾಶ, ಪ್ರಥಮ ಬಹುಮಾನ 8 ಸಾವಿರ, ಏನಿದು ಸ್ಪರ್ಧೆ
ಜಿಲ್ಲೆಯಾದ್ಯಂತ ಸಾವಿರಾರು ಬಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸರ್ಕಾರಿ ಹಾಗೂ ಖಾಸಗಿ ಹಾಸ್ಟೆಲ್‌ಗಳಲ್ಲಿ ವಾಸ್ತವ್ಯ ಹೂಡಿದ್ದಾರೆ. ಪ್ರಸ್ತುತ ಪರೀಕ್ಷೆಗಳು ಆರಂಭವಾಗಿರುವ ಈ ಸಂದರ್ಭದಲ್ಲಿ ಗ್ಯಾಸ್ ಅಭಾವದಿಂದ ಊಟದ ವ್ಯವಸ್ಥೆಗೆ ತೊಂದರೆಯಾದರೆ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಈಗಾಗಲೇ ವಿದ್ಯಾರ್ಥಿಗಳಲ್ಲಿ ಈ ಕುರಿತು ಆತಂಕ ಮನೆಮಾಡಿದೆ ಎಂದು ಸಂಘಟನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.
ಕೇವಲ ಶಿಕ್ಷಣ ಸಂಸ್ಥೆಗಳಲ್ಲದೆ, ರೋಗಿಗಳ ಪ್ರಾಣ ಉಳಿಸುವ ಆಸ್ಪತ್ರೆಗಳಿಗೂ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳುವುದು ಅಗತ್ಯವಾಗಿದೆ. ಜಿಲ್ಲಾಡಳಿತವು ತಕ್ಷಣವೇ ಸಂಬಂಧಪಟ್ಟ ಇಲಾಖೆಗಳಿಗೆ ಸೂಚನೆ ನೀಡಿ, ಈ ಅಗತ್ಯ ಸೇವೆಗಳಿಗೆ ಆದ್ಯತೆಯ ಮೇಲೆ ಸಿಲಿಂಡರ್ ಒದಗಿಸುವಂತೆ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ NSUI ಜಿಲ್ಲಾ ಅಧ್ಯಕ್ಷ ವಿಜಯ್ ಕುಮಾರ್, ಕಾರ್ಯಾಧ್ಯಕ್ಷ ರವಿಕುಮಾರ್, ನಗರ ಉಪಾಧ್ಯಕ್ಷ ಆದಿತ್ಯ, ಸುಭಾನ್, ಶ್ರೀಕಾಂತ್, ಆಕಾಶ್, ಲೋಹಿತ್ ಕುಮಾರ್, ಪ್ರಮೋದ್, ಪ್ರಭು, ಜೀವನ್ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.
LPG Shortage NSUI Urges Action in Shimoga


Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.