ಶಿವಮೊಗ್ಗ ಡಿಸಿಸಿ ಬ್ಯಾಂಕ್​ ನಿರ್ದೇಶಕರಾಗಿ ಎಂ ಶ್ರೀಕಾಂತ್​ ಆಯ್ಕೆ

prathapa thirthahalli
Prathapa thirthahalli - content producer

M shreekanth ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಆಡಳಿತ ಮಂಡಳಿಗೆ ಕಾಂಗ್ರೆಸ್ ನಾಯಕ ಎಂ. ಶ್ರೀಕಾಂತ್ ಅವರು ನಿರ್ದೇಶಕರಾಗಿ ನಾಮನಿರ್ದೇಶನಗೊಂಡಿದ್ದಾರೆ.

79ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ ಅವರು ಶ್ರೀಕಾಂತ್‌ಗೆ ಅಧಿಕೃತ ಪತ್ರವನ್ನು ಹಸ್ತಾಂತರಿದರು.

- Advertisement -

ಈ ಹಿಂದೆ ಅಪೆಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದ  ಎಲ್. ಜಗದೀಶ್ ಅವರ ನಾಮನಿರ್ದೇಶನವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದ್ದು, ಅವರ ಸ್ಥಾನಕ್ಕೆ ಎಂ. ಶ್ರೀಕಾಂತ್ ಬಿನ್ ಮರಿಮಾದಯ್ಯ ಹುಚ್ಚಪ್ಪ ಅವರನ್ನು ನಾಮನಿರ್ದೇಶನ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ವತಿಯಿಂದ ಆದೇಶ ಹೊರಡಿಸಲಾಗಿದೆ. 

ಈ ಕುರಿತು ಪ್ರತಿಕ್ರಿಯೆ ನೀಡಿದ ಎಂ. ಶ್ರೀಕಾಂತ್ ಅವರು, ಈ ಆಯ್ಕೆ ತಮಗೆ ಅಚ್ಚರಿ ತಂದಿದೆ ಮತ್ತು ಯಾವುದೇ ನಿರೀಕ್ಷೆಗಳಿರಲಿಲ್ಲ ಎಂದು ಸಂತಸ ವ್ಯಕ್ತಪಡಿಸಿದರು. ಮುಂದಿನ ಆದೇಶದವರೆಗೆ ಅವರು ನಿರ್ದೇಶಕರಾಗಿ ಸೇವೆ ಸಲ್ಲಿಸಲಿದ್ದಾರೆ.

M shreekanth

 

 

ಎಂ ಶ್ರೀಕಾಂತ್​​
ಎಂ ಶ್ರೀಕಾಂತ್​​

 

Share This Article