100ಕ್ಕೂ ಹೆಚ್ಚು ಆಟೋ ಚಾಲಕರಿಗೆ ಎಂ. ಶ್ರೀಕಾಂತ್‌ರಿಂದ ಬಟ್ಟೆ ವಿತರಣೆ : ಕಾರಣವೇನು

M Sreekanth : ಶಿವಮೊಗ್ಗ: ಕರ್ನಾಟಕದ ಜನಪ್ರಿಯ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರ ಹುಟ್ಟುಹಬ್ಬದ ಅಂಗವಾಗಿ, ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್ ಅವರು ಶಿವಮೊಗ್ಗ ನಗರದಲ್ಲಿ ನೂರಕ್ಕೂ ಹೆಚ್ಚು ಆಟೋ ಚಾಲಕರಿಗೆ ಬಟ್ಟೆಗಳನ್ನು ವಿತರಿಸಿ, ಊಟದ ವ್ಯವಸ್ಥೆ ಮಾಡಿದರು.

ಶಿವಮೊಗ್ಗ ನಗರದ ಲಕ್ಷ್ಮಿ ಟಾಕೀಸ್ ವೃತ್ತದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಲ್ಲಿ ಮುಂಚೂಣಿಯಲ್ಲಿರುವ ಎಂ. ಶ್ರೀಕಾಂತ್ ಅವರು, ಈ ಹಿಂದೆ ದೀಪಾವಳಿ ಹಬ್ಬದ ಪ್ರಯುಕ್ತ 300ಕ್ಕೂ ಹೆಚ್ಚು ಪೌರಕಾರ್ಮಿಕ ಮಹಿಳೆಯರಿಗೆ ಸೀರೆಗಳನ್ನು ವಿತರಿಸಿದ್ದರು. ಅದೇ ರೀತಿ, ಮಾಜಿ ಮುಖ್ಯಮಂತ್ರಿಗಳ ಜನ್ಮದಿನದ ಅಂಗವಾಗಿ ಆಟೋ ಚಾಲಕರಿಗೆ ಬಟ್ಟೆ ಮತ್ತು ಭೋಜನ ವ್ಯವಸ್ಥೆ ಮಾಡುವ ಮೂಲಕ ಸಮಾಜಮುಖಿ ಕೆಲಸವನ್ನು ಮುಂದುವರೆಸಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಮಂಜುನಾಥ್ ಗೌಡ, ಹಿಂದುಳಿದ ವರ್ಗದ ಅಧ್ಯಕ್ಷರಾದ ರಮೇಶ್ ಶಂಕರ್ಘಟ್ಟ, ಮಾಜಿ ಮಹಾಪೌರರಾದ ನಾಗರಾಜ್ ಕಂಕಾರಿ, ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ರೇಖಾ ರಂಗನಾಥ್, ಪಾಲಾಕ್ಷಿ ಹಾಗೂ ಕಾಂಗ್ರೆಸ್ ಮುಖಂಡರಾದ ರಂಗನಾಥ್, ಭಾಸ್ಕರ್, ವಿನಯ್ ತಾಂದಲೆ, ಬಸವರಾಜ್, ಪುರಲ್ಲೇ ಮಂಜು, ನಾಗರಾಜ್ ಕುರುವಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

M Sreekanth

Malenadu Today

Malenadu Today

Leave a Comment

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು