ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 18 2025 : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಅಪ್ಡೇಟ್ ಸಿಕ್ಕಿದೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ಇನ್ಮುಂದೆ ಪ್ರತಿನಿತ್ಯ ಬೆಂಗಳೂರಿಗೆ ಇಂಡಿಗೋ ವಿಮಾನ ಪ್ರಯಾಣ ಬೆಳಸಲಿದೆ ಎಂಬ ಸುದ್ದಿಯನ್ನು ಇದೇ ಮಲೆನಾಡು ಟುಡೆ ಪ್ರಕಟ ಮಾಡಿತ್ತು.
ಇದರ ಬೆನ್ನಲ್ಲೆ ಇದೀಗ ಮತ್ತೊಂದು ಅಪ್ಡೇಟ್ ಸಿಕ್ಕಿದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ನ್ಯಾವಿಗೇಷನ್ ಉಪಕರಣವಾದ ಡಿವಿಒಆರ್ (DVOR) ಅಳವಡಿಸಲು ರಾಜ್ಯ ಸರ್ಕಾರವು 6.50 ಕೋಟಿ ರೂಪಾಯಿ ಬಿಡುಗಡೆ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಕುರಿತು ಅವರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ, ರಾತ್ರಿ ವೇಳೆಯಲ್ಲೂ ವಿಮಾನಗಳ ಹಾರಾಟ ಮತ್ತು ಇಳಿಯುವಿಕೆಗೆ ಅನುಕೂಲವಾಗುವ ಉಪಕರಣಗಳನ್ನು ತರಿಸಲಾಗಿದೆಯಾದರೂ, ರಾಜ್ಯ ಸರ್ಕಾರ ಅವುಗಳನ್ನು ಅಳವಡಿಸಲು ಆಸಕ್ತಿ ತೋರಿಸುತ್ತಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಆರೋಪಿಸಿದ್ದರು. ಈ ಆರೋಪಕ್ಕೆ ಸಚಿವ ಮಧು ಬಂಗಾರಪ್ಪ ಅವರು ಸಹ ಪ್ರತಿಕ್ರಿಯೆ ನೀಡಿದ್ದರು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಈಗ ಈ ಕಾಮಗಾರಿಗೆ ಹಣ ಬಿಡುಗಡೆಯಾಗಿರುವ ಕುರಿತು ಮಾಹಿತಿ ಪ್ರಕಟವಾಗಿದೆ.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

madhu bangarappa 6.5 for shivamogga airport

