ಶಿವಮೊಗ್ಗ : ಮಧು ಬಂಗಾರಪ್ಪರಿಗೆ ಮತ್ತೊಮ್ಮೆ ಸಚಿವ ಸ್ಥಾನ: ನೂತನ ಸಚಿವರ ಪೈನಲ್​​ ಲೀಸ್ಟ್​​​ ಇಲ್ಲಿದೆ ನೋಡಿ

ಹಂಚಿಕೊಳ್ಳಿ
WhatsApp Facebook X Telegram
Madhu Bangarappa

Madhu Bangarappa ಶಿವಮೊಗ್ಗ: ಬಹಳ ನಿರೀಕ್ಷೆ ಹುಟ್ಟಿಸಿದ್ದ ಸಚಿವ ಸಂಪುಟ ಪುನಾರಚನೆಗೆ ಕೊನೆಗೂ ತೆರೆ ಬಿದ್ದಿದ್ದು, ಶಿವಮೊಗ್ಗದಲ್ಲಿ ಮತ್ತೊಮ್ಮೆ ಮಧು ಬಂಗಾರಪ್ಪನವರಿಗೆ ಸಚಿವ ಸ್ಥಾನ ದೊರೆತಿದೆ. ಈ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪನವರ ಬೆಂಬಲಿಗರು ಶಿವಮೊಗ್ಗದಲ್ಲಿ ಸಂಭ್ರಮಾಚರಣೆ ಮಾಡಿದ್ದಾರೆ.

ಶಿವಮೊಗ್ಗ : ತುಂಗಾ ಜಲಾಶಯದ ಒಳಹರಿವು ಹಾಗೂ ಹೊರಹರಿವು ಎಷ್ಟಿದೆ ಇವತ್ತು

ಜೂನ್ 03 ರಂದು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾಗ, ಡಿ.ಕೆ. ಶಿವಕುಮಾರ್ ರವರೊಂದಿಗೆ 13 ಜನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರು. ಇನ್ನುಳಿದ 20 ಸಚಿವ ಸ್ಥಾನಗಳಿಗೆ ಬಹಳ ಪೈಪೋಟಿ ನಡೆದಿತ್ತು. ಅದರಲ್ಲೂ ಶಿವಮೊಗ್ಗದಲ್ಲಿ ಈಡಿಗ ಕೋಟಾದಡಿ ಇಬ್ಬರು ಪ್ರಭಾವಿ ನಾಯಕರುಗಳಾದ ಮಾಜಿ ಸಚಿವ ಎಸ್. ಮಧು ಬಂಗಾರಪ್ಪ ಹಾಗೂ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿತ್ತು. 

ಇದೀಗ ಹೈಕಮಾಂಡ್ ಸಚಿವ ಸ್ಥಾನಕ್ಕೆ ಫೈನಲ್ ಟಚ್ ಕೊಟ್ಟಿದ್ದು, ಈಡಿಗ ಕೋಟಾದಡಿ ಮಧು ಬಂಗಾರಪ್ಪರಿಗೆ ಮತ್ತೊಮ್ಮೆ ಸಚಿವ ಸ್ಥಾನ ಲಭಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಯೋಜನೆಗಳು ಸೇರಿದಂತೆ ಇನ್ನಿತರೆ ಉತ್ತಮ ಕಾರ್ಯ ನಿರ್ವಹಣೆಯನ್ನು ಗುರುತಿಸಿ ಈ ಸಚಿವ ಸ್ಥಾನವನ್ನು ನೀಡಲಾಗಿದೆ ಎಂದು ಹೇಳಲಾಗಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor