madhu bangarappa :  SSLC ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದ ವಿದ್ಯಾರ್ಥಿನಿಯನ್ನು ಸನ್ಮಾನಿಸಿದ ಮಧು ಬಂಗಾರಪ್ಪ

prathapa thirthahalli
Prathapa thirthahalli - content producer

madhu bangarappa :ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದ ಶಿರಸಿಯ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶಗುಪ್ತಾ ಅಂಜುಮ್ ಅವರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ   ಶುಕ್ರವಾರ  ಸರ್ಕಾರಿ ಶಾಲೆಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.

madhu bangarappa :  ವೈದ್ಯೆಯಾಗುವ ಕನಸು ನೆರವೇರಲಿ

ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಗುಪ್ತಾ ಅಂಜುಮ್ ವೈದ್ಯೆಯಾಗುವ ಕನಸು ಕಂಡಿದ್ದು, ಎಲ್ಲರಿಗೆ ಸ್ಪೂರ್ತಿದಾಯಕವಾಗಿದೆ. ಅವರ ಈ ಆಶಯ ನೆರವೇರಲಿ ಎಂದು ನಾನು ಹಾರೈಸುತ್ತೇನೆ. ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರು ಮತ್ತು ಪೋಷಕರ ಪಾತ್ರ ಅತ್ಯಮೂಲ್ಯವಾದದ್ದು. ಇಂತಹ ಸಾಧನೆಯಿಂದ ಭಾರತದ ದಿವ್ಯ ಪರಂಪರೆಗೆ ಮುನ್ನುಡಿ ಬರೆಯುವಂತರಾಗಲಿ. ಅವರೆಲ್ಲರಿಗೂ ನನ್ನ ಗೌರವ ಮತ್ತು ಅಭಿನಂದನೆಗಳು ಎಂದರು.

ಹಾಗೆಯೇ, ಬೈಲಹೊಂಗಲ ಶಾಸಕರಾದ ಶ್ರೀ ಮಹಾಂತೇಶ ಕೌಜಲಗಿ ಅವರು ತಮ್ಮ ಜಿಲ್ಲೆಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿನಿಯನ್ನು ಸನ್ಮಾನಿಸಿ ಗೌರವಿಸಿ, ಶುಭ ಹಾರೈಸಿದ್ದಾರೆ. ಅವರಿಗೆ ಸಚಿವ ಮಧು ಬಂಗಾರಪ್ಪನವರು ಈ ಸಂದರ್ಭದಲ್ಲಿ ಅಭಿನಂದಿಸಿದರು.

Share This Article