madhu bangarappa today ಶಿವಮೊಗ್ಗದಲ್ಲಿ “ಜನಸಂಪರ್ಕ ಸಭೆ”: ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ
Shivamogga news / ಶಿವಮೊಗ್ಗ, ಜುಲೈ 02, 2025: ಜಿಲ್ಲೆಯ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ಮತ್ತು ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರು ಇವತ್ತು ಶಿವಮೊಗ್ಗದ್ದಲ್ಲಿ ಜನಸಂಪರ್ಕ ಸಭೆ” ನಡೆಸಲಿದ್ದಾರೆ. ಇವತ್ತು ಗುರುವಾರ ಬೆಳಗ್ಗೆ 10:30ಕ್ಕೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ, ನ್ಯಾಯಾಂಗ ವಿಭಾಗದಲ್ಲಿ ನಡೆಯಲಿದೆ. ಜನರು ತಮ್ಮ ಸಮಸ್ಯೆಗಳನ್ನು ಈ ಸಂದರ್ಭದಲ್ಲಿ ಹೇಳಿಕೊಳ್ಳಬಹುದಾಗಿದ್ದು, ಈ ಸಂಬಂಧ ಪ್ರಕಟಣೆಯನ್ನು ಸಹ ನೀಡಲಾಗಿದೆ.

madhu bangarappa today
ಜಿಲ್ಲೆಯ ಸಾರ್ವಜನಿಕರು ತಮ್ಮ ವೈಯಕ್ತಿಕ ಮತ್ತು ಸಾರ್ವಜನಿಕ ಸಮಸ್ಯೆಗಳನ್ನು ನೇರವಾಗಿ ಸಚಿವರ ಗಮನಕ್ಕೆ ತರಲು ಈ ಸಭೆ ಅವಕಾಶ ಒದಗಿಸುತ್ತದೆ. ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದರೂ, ನೇರವಾಗಿ ಸಚಿವರಿಗೆ ಮನವಿ ಸಲ್ಲಿಸುವಂತೆ ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ.
ಸಭೆಯಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಿದ್ಧಪಡಿಸಿಕೊಂಡು ಬರುವಂತೆ ಸೂಚಿಸಲಾಗಿದೆ.
