2 ದಿನ ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಪ್ರವಾಸ |ಬಗರ್‌‌ ಹುಕುಂ ಅಕ್ರಮ– ಸಕ್ರಮ ಸಮಿತಿ ಬಗ್ಗೆ ಹೆಚ್ಚಿದ ಕುತೂಹಲ

madhu bangarappa tour Shivamogga | ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಇವತ್ತು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಡಲಿದ್ದಾರೆ

2 ದಿನ ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಪ್ರವಾಸ |ಬಗರ್‌‌ ಹುಕುಂ ಅಕ್ರಮ– ಸಕ್ರಮ ಸಮಿತಿ ಬಗ್ಗೆ ಹೆಚ್ಚಿದ ಕುತೂಹಲ
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ

SHIVAMOGGA | MALENADUTODAY NEWS | Sep 1, 2024  

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಇವತ್ತು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಇವತ್ತಿನಿಂದ ಎರಡು ದಿನ ಅವರು ಶಿವಮೊಗ್ಗದಲ್ಲಿ ಇರಲಿದ್ದು, ಅವರ ಪ್ರವಾಸ ಕಾರ್ಯಕ್ರಮದ ವಿವರ ಹೀಗಿದೆ 

ಸೆಪ್ಟೆಂಬರ್‌ ಒಂದು ಅಂದರೆ ಇವತ್ತು ಭಾನುವಾರ ಬೆಳಿಗ್ಗೆ 10 ಗಂಟೆಗೆ ಸೊರಬ ತಾಲ್ಲೂಕಿನ ಆನವಟ್ಟಿಯಲ್ಲಿ ಶರಣ ನುಲಿಯ ಚಂದಯ್ಯ ಜಯಂತ್ಯುತ್ಸವದಲ್ಲಿ ಮಧು ಬಂಗಾರಪ್ಪ ಪಾಲ್ಗೊಳ್ಳುವರು.

ಆ ಬಳಿಕ ಮರುದಿನ ಅಂದರೆ, ಸೆಪ್ಟೆಂಬರ್‌ 2ರಂದು ಬೆಳಿಗ್ಗೆ 10 ಗಂಟೆಗೆ ಸೊರಬ ತಾಲ್ಲೂಕು ಕಚೇರಿಯಲ್ಲಿ ಬಗರ್‌ಹುಕುಂ ಅಕ್ರಮ– ಸಕ್ರಮ ಸಮಿತಿ ಸಭೆಯಲ್ಲಿ ಭಾಗವಹಿಸುವರು. 

ಬೆಳಿಗ್ಗೆ 11ಕ್ಕೆ ಸೊರಬ ರಂಗಮಂದಿರದಲ್ಲಿ ನಡೆಯುವ ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ಅಧಿಕಾರಿಗಳೊಂದಿಗೆ ಜಂಟಿ ಸಭೆಯಲ್ಲಿ ಪಾಲ್ಗೊಂಡು, ಮಧ್ಯಾಹ್ನ 2ಕ್ಕೆ ಸೊರಬದ ರಂಗಮಂದಿರದಲ್ಲಿ ನಡೆಯುವ ತಾಲ್ಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಟೂರ್‌ ಪ್ಲಾನ್‌ನಲ್ಲಿ ತಿಳಿಸಲಾಗಿದೆ. 

ಇನ್ನಷ್ಟು ಸುದ್ದಿಗಳು

ಆನ್ ಲೈನ್ ಮನಿ ಟ್ರೇಡಿಂಗ್ ದಂಧೆಗೆ ಸಿಲುಕಿ ಆತ್ಮಹತ್ಯೆಗೆ ಶರಣಾದನೇ ತೀರ್ಥಹಳ್ಳಿಯ ರ್ಯಾಂಕ್ ವಿದ್ಯಾರ್ಥಿ,ಕಿಚ್ಚ ?

ಅಗ್ನಿವೀರ್‌ | ಒಂದೇ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ಕೆಲಸ ಕಳೆದುಕೊಳ್ಳಬೇಕಾಯಿತು | ನಡೆದಿದ್ದೇನು?

Bhadra dam | ಮತ್ತೆ ಬರುತ್ತಿದೆ ಮಳೆ | ತುಂಗಾ ಡ್ಯಾಂ ಭರ್ತಿ, ಭದ್ರಾ ಡ್ಯಾಂನಲ್ಲಿ ಎಷ್ಟಿದೆ ನೀರಿನ ಮಟ್ಟ!?