ಈ ಸಲ ಮಕ್ಕಳಿಗೆ ಕೊಟ್ಟ ಶೂ–ಸಾಕ್ಸ್ ಭಾರೀ ಚೆನ್ನಾಗಿದೆಯಂತೆ! ಗುಣಮಟ್ಟ ಪರಿಶೀಲಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಹಂಚಿಕೊಳ್ಳಿ
WhatsApp Facebook X Telegram
Education Minister Madhu Bangarappa Makes Surprise Visit to Ayanur Government School, Checks Shoes and Socks Quality
Education Minister Madhu Bangarappa Makes Surprise Visit to Ayanur Government School, Checks Shoes and Socks Quality

ಮಲೆನಾಡು ಟುಡೆ ಸುದ್ದಿ / ಆಯನೂರು / ಶಿವಮೊಗ್ಗ ತಾಲೂಕಿನ ಆಯನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶುಕ್ರವಾರ ದಿಢೀರ್ ಭೇಟಿ ನೀಡಿದ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರು ವಿದ್ಯಾರ್ಥಿಗಳಿಗೆ ವಿತರಿಸಲಾಗಿರುವ ಶೂ ಮತ್ತು ಸಾಕ್ಸ್‌ಗಳ ಗುಣಮಟ್ಟವನ್ನು ಪರಿಶೀಲಿಸಿದರು. ಈ ವೇಳೆ ಅವರಿಗೆ ಮಕ್ಕಳು ಶೂ-ಸಾಕ್ಸ್​ ಚೆನ್ನಾಗಿದೆ ಅಂತಾ ಹೇಳಿದ್ದಾರೆ.

ಇತ್ತೀಚೆಗೆ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟದ ಬಗ್ಗೆ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಸಚಿವರು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ನೇರವಾಗಿ ಸಂವಾದ ನಡೆಸಿದರು.

ಸರ್ಕಾರದಿಂದ ನೀಡಲಾಗಿರುವ ಶೂ ಮತ್ತು ಸಾಕ್ಸ್ ಎಲ್ಲ ವಿದ್ಯಾರ್ಥಿಗಳಿಗೂ ದೊರೆತಿದೆಯೇ ಎಂದು ಸಚಿವರು ಮಕ್ಕಳನ್ನು ಪ್ರಶ್ನಿಸಿದರು. ವಿದ್ಯಾರ್ಥಿಗಳಿಗೆ ವಿತರಿಸಿರುವ ಶೂ ಹಾಗೂ ಸಾಕ್ಸ್‌ಗಳನ್ನು ಸ್ವತಃ ಪರಿಶೀಲಿಸಿ ಅವುಗಳ ಗುಣಮಟ್ಟದ ಬಗ್ಗೆಯೂ ಮಕ್ಕಳಿಂದ ಮಾಹಿತಿ ಪಡೆದರು.

ತಮಗೆ ನೀಡಲಾಗಿರುವ ಶೂ ಮತ್ತು ಸಾಕ್ಸ್‌ಗಳ ಗುಣಮಟ್ಟ ತೃಪ್ತಿಕರವಾಗಿದೆ. ಈ ಬಗ್ಗೆ ತಮ್ಮ ಪೋಷಕರೂ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ವಿದ್ಯಾರ್ಥಿಗಳು ಸಚಿವರಿಗೆ ತಿಳಿಸಿದರು.

ಇದೇ ವೇಳೆ ವಿದ್ಯಾರ್ಥಿನಿಯೊಬ್ಬರು ಶಾಲೆಯ ಶೌಚಾಲಯ ವ್ಯವಸ್ಥೆಯನ್ನು ಸರಿಪಡಿಸುವಂತೆ ಸಚಿವರಲ್ಲಿ ಮನವಿ ಮಾಡಿದರು. ವಿದ್ಯಾರ್ಥಿನಿಯ ಮನವಿಗೆ ಸ್ಪಂದಿಸಿದ ಸಚಿವ ಮಧು ಬಂಗಾರಪ್ಪ ಅವರು ಶಾಲೆಯ ನೈರ್ಮಲ್ಯ ಮತ್ತು ಶೌಚಾಲಯ ವ್ಯವಸ್ಥೆಯನ್ನು ಸರಿಪಡಿಸುವುದಕ್ಕೆ ಆದ್ಯತೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಬಿಸಿಯೂಟದ ಗುಣಮಟ್ಟಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಬಳಿಕ ಶಾಲೆಯ ಚಾವಣಿಯ ದುರಸ್ತಿ ಕಾರ್ಯವನ್ನು ಪರಿಶೀಲಿಸಿದ ಸಚಿವರು, ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor