ಭದ್ರಾವತಿಗೆ ಬಾರದ ಮಧು ಬಂಗಾರಪ್ಪ | ಉಸ್ತುವಾರಿ ಸಚಿವರಿಗೆ ಇನ್ನೊಂದು ವಿರೋಧ!

Malenadu Today

KARNATAKA NEWS/ ONLINE / Malenadu today/ Oct 31, 2023 SHIVAMOGGA NEWS

SHIVAMOGGA | ವಾರದಲ್ಲಿ ಎರಡು, ಮೂರು ದಿನ ಶಿವಮೊಗ್ಗಕ್ಕೆ ಬರುವ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಒಮ್ಮೆಯೂ ಭದ್ರಾವತಿಗೆ ಬಂದಿಲ್ಲ, ಕೆಡಿಪಿ ಸಭೆಯನ್ನೂ ನಡೆಸಿಲ್ಲ. ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಿಲ್ಲ. ಭದ್ರಾವತಿ ಕ್ಷೇತ್ರದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂಬ ಆರೋಪ ಇದೀಗ ಕೇಳಿಬಂದಿದೆ. 

ಈ ನಿಟ್ಟಿನಲ್ಲಿ ಇಂದು  ಭದ್ರಾವತಿಯಲ್ಲಿ ಅಂಬೇಡ್ಕರ್‌ಭವನದ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್.ರಾಜು ತಿಳಿಸಿದ್ದಾರೆ. ಭದ್ರಾವತಿಯಲ್ಲಿ ಸಾಕಷ್ಟು ಕಾಮಗಾರಿಗಳು ಅರೆಬರೆಯಾಗಿ ನಿಂತಿವೆ. ಎಷ್ಟೇ ಮನವಿ ಸಲ್ಲಿಸಿದರೂ ಕೆಲಸವಾಗುತ್ತಿಲ್ಲ. ಅನೇಕ ಕಾಮಗಾರಿಗಳು ಕಳಪೆಮಟ್ಟದಲ್ಲಿ ನಡೆಯುತ್ತಿವೆ. ಅವರನ್ನು ಭೇಟಿ ಮಾಡಿ ಭದ್ರಾವತಿಗೆ ಬರುವಂತೆ ಅಹ್ವಾನಿಸಿದರೂ ಭದ್ರಾವತಿಗೆ ಬಂದಿಲ್ಲ. ಕೇವಲ ಶಿವಮೊಗ್ಗ ಸಾಗರ, ಸೊರಬ, ಶಿಕಾರಿಪುರಕ್ಕೆ ಮಾತ್ರ ಸೀಮಿತವಾಗಿದ್ದಾರೆ ಎಂದು ಆರೋಪಿಸಿದ್ದಾರೆ.  


Share This Article