ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶದಲ್ಲಿ ಮಧು ಬಂಗಾರಪ್ಪರವರ ಮಹತ್ವದ ಮಾತು

Shivamogga Feb 24, 2024  ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶ ನಡೆಯುತ್ತಿದೆ.ಸಮಾವೇಶದಲ್ಲಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ರವರು ನಮ್ಮ ಕಾಂಗ್ರೆಸ್​ ಸರ್ಕಾರ ಮುಂದಿನ ಚುನಾವಣೆಯನ್ನು ಗ್ಯಾರಂಟಿ ಯೋಜನೆಗಳ ಆಧಾರದ ಮೇಲೆ ಕೇಳಿ ಎಂದು ಸೂಚಿಸಿದೆ. ಅದೇ ರೀತಿಯಲ್ಲಿ ನಾನು ಚುನಾವಣೆಯ ತಯಾರಿ ನಡೆಸ್ತಿದ್ದೇವೆ..

ಈ ಹಿಂದೆ ಬಿಲ್ ಜಾಸ್ತಿ ಬರುತ್ತಿದೆ , ಲೈಟ್ ಆಫ್ ಮಾಡು ಎನ್ನುತ್ತಿದ್ದರು. ಈಗ ನಿಮ್ಮ ಮನೆಯ ಫ್ಯೂಜ್​ ಕಟ್​ ಮಾಡುವ ದೈರ್ಯ ಯಾರು ತೋರುತ್ತಿದ್ದಾರೆ. ಅಂತಹದ್ದೊಂದು ಅವಕಾಶವನ್ನು ಸಿದ್ದರಾಮಯ್ಯ ಸರ್ಕಾರ ತಂದುಕೊಟ್ಟಿದ್ದಾರೆ. ಈ ಹಿಂದೆ ಬಂಗಾರಪ್ಪರವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನೀಡಿದ್ದ ಉಚಿತ ವಿದ್ಯುತ್ ನಿಂದ ರೈತರ ಹೊಲ ಹಸಿರಾಗಿದೆ. 

ಇದು ನೀವು ಕೊಟ್ಟಿರುವ ಸರ್ಕಾರ, ಈ ಸರ್ಕಾರಕ್ಕೆ ಬಾಳಿಕೆ ಇಲ್ಲ ಎಂದು ಟೀಕಿಸಿದ್ರು. ಆದರೆ ಇದು ನೀವು ಹೆತ್ತಿರುವ ಸರ್ಕಾರ ಎಂದ ಮಧು ಬಂಗಾರಪ್ಪರವರು, ಈ ಸಲ ಶಿಕ್ಷಣ ಇಲಾಖೆಗೆ 44 ಸಾವಿರ ಕೋಟಿ ರೂಪಾಯಿಯನ್ನ ಸಿದ್ದರಾಮಯ್ಯ ಸರ್ಕಾರ ನೀಡಿದೆ. ಸಿದ್ದರಾಮಯ್ಯ ಸರ್ಕಾರದ ಖಜಾನೆ ಖಾಲಿಯಾಗುವುದಿಲ್ಲ ಎಂದ ಸಚಿವರು ಸಾಹುಕಾರ ಕೈಯಲ್ಲಿ ದುಡ್ಡಿರಬಾರದು, ಸಾಹುಕಾರರ ಕೈಯಲ್ಲಿ ದುಡ್ಡಿದ್ದರೇ ಬ್ಯಾಂಕ್​ನಲ್ಲಿ ಇಡುತ್ತಾರೆ, ಬಡವರ ಕೈಗೆ ದುಡ್ಡು ಕೊಟ್ಟರೆ ಅದನ್ನ ವ್ಯಯಿಸುವ ಮೂಲಕ ಸರ್ಕಾರ ನೀಡುತ್ತಾರೆ. 

ರಾಜ್ಯದಲ್ಲಿ ಕಮಿಷನ್ ಯುಗ ಮುಗಿದುಹೋಗಿದೆ. ರಾಜ್ಯದ ಯೋಜನೆಗಳ ಹಣವು ನೇರವಾಗಿ ನಿಮ್ಮ ಅಕೌಂಟ್​ಗೆ ಬರುತ್ತಿದೆ. ರಾಜ್ಯದಲ್ಲಿ ಐದು ವರ್ಷ ಅಧಿಕಾರಿದಲ್ಲಿ ಇರುತ್ತದೆ. ಗ್ಯಾರಂಟಿಗಳನ್ನ ಒದಗಿಸಿದ ಸರ್ಕಾರಕ್ಕೆ ಹಾಗೂ ಕಾರ್ಯಕ್ರಮಕ್ಕೆ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್​ರವರಿಗೆ ಧನ್ಯವಾದ ಎಂದರು

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು