Major Accident
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಗುರುಟೆ ಬಳಿ ಇಂದು ಬೆಳಿಗ್ಗೆ ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಾಗರದಿಂದ ಹೊರಟು ನಿಟ್ಟೂರು ಮಾರ್ಗವಾಗಿ ಕುಂದಾಪುರ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್, ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ತೀವ್ರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬಸ್‌ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಕೆಎಸ್ಆರ್ಟಿಸಿ ಬಸ್ನಲ್ಲಿ ಟಿಕೆಟ್ ಮಾಡಿಸಲು ವ್ಯಾನಿಟಿ ಬ್ಯಾಕ್ ತೆಗೆದ ಮಹಿಳೆಗೆ ಕಾದಿತ್ತು ಶಾಕ್
ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್‌ನಲ್ಲಿದ್ದ ಇತರ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.


