SHIVAMOGGA NEWS TODAY

ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿದ್ದ ಆಸೀಫ್ ಖಾನ್ ಬಂಧನ; ವಶಪಡಿಸಿಕೊಂಡ ಮಾಲ್​​ ಎಷ್ಟು ಗೊತ್ತಾ,,?

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ನಗರದ ಎನ್.ಟಿ. ರಸ್ತೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ದೊಡ್ಡಪೇಟೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. 

6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಶಿವಮೊಗ್ಗದಲ್ಲಿ ಬಂಧನ

ಎನ್.ಟಿ. ರಸ್ತೆಯ ಹೋಟೆಲ್‌ವೊಂದರ ಮುಂಭಾಗದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಐ ಹಾಗೂ ಪಿಎಸ್ಐ ಅವರ ನೇತೃತ್ವದ ವಿಶೇಷ ತಂಡವು ಸ್ಥಳಕ್ಕೆ ದೌಡಾಯಿಸಿ ದಾಳಿ ನಡೆಸಿದೆ. 

ಈ ಕಾರ್ಯಾಚರಣೆಯ ವೇಳೆ ಶಿವಮೊಗ್ಗದ ರಾಗಿಗುಡ್ಡ ನಿವಾಸಿ ಆಸೀಫ್ ಖಾನ್ (33) ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ. ಬಂಧಿತ ಆರೋಪಿಯಿಂದ ಅಂದಾಜು 70,000 ರೂಪಾಯಿ ಮೌಲ್ಯದ 1 ಕೆಜಿ 400 ಗ್ರಾಂ ತೂಕದ ಗಾಂಜಾವನ್ನು ಜಪ್ತಿ ಮಾಡಲಾಗಿದೆ. 

Major Drug Bust Peddler Caught Red-Handed

Major Drug Bust Peddler Caught Red-Handed
Major Drug Bust Peddler Caught Red-Handed
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.