ಆನಂದಪುರ : ಮಲಂದೂರು ಗ್ರಾಮದ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 1 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಕಳೆದ ಒಂದೂವರೆ ವರ್ಷದಲ್ಲಿ ಈ ಘಟಕವು ಮೂರನೇ ಬಾರಿಗೆ ಬೆಂಕಿ ತಗುಲಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಸಾಗರದಿಂದ ಅಗ್ನಿಶಾಮಕ ದಳವನ್ನು ಕರೆಸಲಾಯಿತು. ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದರು. ಆದರೆ ಪ್ಲಾಸ್ಟಿಕ್ ಮತ್ತು ರಬ್ಬರ್ ತ್ಯಾಜ್ಯಕ್ಕೆ ಬೆಂಕಿ ತಗುಲಿದ ಪರಿಣಾಮವಾಗಿ ದಟ್ಟವಾದ ಹೊಗೆ ಬಹುದೂರದವರೆಗೆ ವ್ಯಾಪಿಸಿತು.
- Advertisement -