ಶಿವಮೊಗ್ಗದಲ್ಲಿ ನಡೆದ ಎಲ್ಲಾ ಸುದ್ದಿಗಳು ನಿಮ್ಮ ಮಲೆನಾಡು ಟುಡೆ ಇ -ಪೇಪರ್​​ನಲ್ಲಿ 

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
shivamogga dasara shivamogga

ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ : ಶಿವಮೊಗ್ಗ ನಗರದ ಬಿ.ಎಚ್. ರಸ್ತೆಯಲ್ಲಿ ನೂತನವಾಗಿ ಆರಂಭಿಸಲಾದ ‘ಬಿ.ಎಸ್.ಸಿ. ಟೆಕ್ಸ್‌ಟೈಲ್ಸ್’ ವಸ್ತ್ರ ಮತ್ತು ಹೋಮ್ ಫರ್ನಿಷಿಂಗ್ ಬೃಹತ್ ಮಳಿಗೆಯು ಸೋಮವಾರ ವಿಧ್ಯುಕ್ತವಾಗಿ ಲೋಕಾರ್ಪಣೆಗೊಂಡಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ವಿ. ಸೋಮಣ್ಣ ಸೇರಿದಂತೆ ಹಲವು ಗಣ್ಯರು ಜ್ಯೋತಿ ಬೆಳಗುವ ಮೂಲಕ ಮಳಿಗೆಯನ್ನು ಉದ್ಘಾಟಿಸಿದರು.

ಆದರೆ, ಈ ಉದ್ಘಾಟನಾ ಸಮಾರಂಭಕ್ಕೆ ಆಗಮಿಸುತ್ತಿದ್ದ ಕೇಂದ್ರ ಸಚಿವ ವಿ. ಸೋಮಣ್ಣ ಅವರ ಕಾರಿಗೆ ವಿನಾಯಕ ಪಾರೇಖ್ ಮಾಲ್ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಗಟ್ಟಿ, ಕಪ್ಪು ಬಟ್ಟೆ ಹಾಗೂ ಕಪ್ಪು ಬಾವುಟ ಪ್ರದರ್ಶಿಸಿ ತೀವ್ರ ವಿರೋಧ ವ್ಯಕ್ತಪಡಿಸಿದರು. ಸಚಿವರ ಭದ್ರತೆಗೆ ಕುತ್ತು ತಂದ ಹಾಗೂ ಗಣ್ಯರ ಆಗಮನದ ಕುರಿತು ಸ್ಥಳೀಯ ದೊಡ್ಡಪೇಟೆ ಪೊಲೀಸ್ ಠಾಣೆಗೆ ಮುಂಚಿತವಾಗಿ ಯಾವುದೇ ಅಧಿಕೃತ ಮಾಹಿತಿ ನೀಡದೆ ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ, ಪ್ರತಿಭಟನಾಕಾರರಾದ 20ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ‘ಬಿ.ಎಸ್. ಚನ್ನಬಸಪ್ಪ & ಸನ್ಸ್’ ಬಟ್ಟೆ ಮಳಿಗೆಯ ವ್ಯವಸ್ಥಾಪಕರ ವಿರುದ್ಧವೂ ಪೊಲೀಸರು ಸ್ವಯಂಪ್ರೇರಿತ (ಸುಮೋಟೋ) ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

shivamogga dasara shivamogga
shivamogga dasara shivamogga

ಪಿಡಿಎಫ್​​​ನಲ್ಲಿರುವ ಪ್ರಮುಖ ಸುದ್ದಿಗಳು

  • ಶಿವಮೊಗ್ಗದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಉಗ್ರ ಪ್ರತಿಭಟನೆ: ಸಂಸದ ಹಾಗೂ ಪ್ರೊಫೇಸರ್ ಹಂಗೋಮ್ಟಾ ಭಿಮೋಲ್ ಹಾಕೋಜಾಂ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯದ ಆರೋಪ ಖಂಡಿಸಿ ಗೋಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಮಹಿಳಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
  • ಶಿವಮೊಗ್ಗದಲ್ಲಿ ₹1,800 ಕೋಟಿ ಬಾಕಿ ಬಿಲ್ ಪಾವತಿಗೆ ಗುತ್ತಿಗೆದಾರರ ಆಗ್ರಹ: ವಿವಿಧ ಇಲಾಖೆಗಳಿಂದ ಬರಬೇಕಿರುವ ಕೋಟ್ಯಂತರ ರೂ. ಬಾಕಿ ಬಿಲ್ ಹಣವನ್ನು ದಸರಾ ಹಬ್ಬದೊಳಗೆ ಬಿಡುಗಡೆ ಮಾಡಬೇಕು ಹಾಗೂ ಕೆಎನ್‌ಎನ್‌ಎಲ್‌ನಲ್ಲಿನ ಜಟಿಲ ಪ್ರಕ್ರಿಯೆ ಸಡಿಲಗೊಳಿಸಬೇಕೆಂದು ಮಲೆನಾಡು ಗುತ್ತಿಗೆದಾರರ ಸಂಘ ಒತ್ತಾಯಿಸಿದೆ.
  • ಸಾಗರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ: ಕೇಂದ್ರ ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸದೆ ಕಾಲಾವಕಾಶ ಕೋರಿರುವುದನ್ನು ಖಂಡಿಸಿ ಹಾಗೂ ಸಾಗರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿ ರೈತ ಸಂಘದ ವತಿಯಿಂದ ರಸ್ತೆ ತಡೆ ನಡೆಸಲಾಯಿತು.
  • ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲು ರೈತ ಮೋರ್ಚಾ ಒತ್ತಡ: ಮಳೆಯ ಕೊರತೆಯಿಂದ ಬೆಳೆಗಳು ಒಣಗಿ ಹೋಗಿದ್ದು, ಬೆಳೆ ಸಮೀಕ್ಷೆಯಲ್ಲಿ ಉಂಟಾಗಿರುವ ಲೋಪಗಳನ್ನು ಸರಿಪಡಿಸಿ ರೈತರಿಗೆ ಸೂಕ್ತ ಪರಿಹಾರ ಮತ್ತು ಬೆಳೆ ವಿಮೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
  • ಸಕ್ರೆಬೈಲು ಆನೆ ಬಿಡಾರಕ್ಕೆ ಪಶುವೈದ್ಯರ ನೇಮಕ, ಅರ್ಜಿ ಸಲ್ಲಿಕೆ ವಿಸ್ತರಣೆ: ಸಕ್ರೆಬೈಲು ಆನೆ ಬಿಡಾರದ ಆನೆಗಳ ಆರೈಕೆ ಮತ್ತು ವನ್ಯಜೀವಿ ರಕ್ಷಣೆಗಾಗಿ ಹೊರಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ನೇಮಕಾತಿಗೆ ಅಕ್ಟೋಬರ್ 16ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅಕ್ಟೋಬರ್ 17ರಂದು ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಈ ಮೇಲಿನ ಎಲ್ಲಾ ಸುದ್ದಿಗಳ ಸಂಪೂರ್ಣ ವಿವರಗಳು ತಿಳಿದುಕೊಳ್ಳಲು (ಇ-ಲಿಂಕ್​) ಕ್ಲಿಕ್​ ಮಾಡಿ

dasara add shivamogga palike
ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor