ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣೇಶೋತ್ಸವದ ಮೆರವಣಿಗೆ ವಿಚಾರ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

ದೃಢ ಸಂಕಲ್ಪದೊಂದಿಗೆ ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ : ಎಸ್.ಎನ್. ಚನ್ನಬಸಪ್ಪ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ವೇಟ್ ಲಿಫ್ಟಿಂಗ್ ಕೇವಲ ದೇಶದ ಶಕ್ತಿಯನ್ನಷ್ಟೇ ಅಲ್ಲದೆ, ಮನಸ್ಸಿನ ಏಕಾಗ್ರತೆ ಮತ್ತು ದೃಢ ಸಂಕಲ್ಪವನ್ನೂ ಪರೀಕ್ಷಿಸುವ ಕ್ರೀಡೆಯಾಗಿದೆ. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಶಿವಮೊಗ್ಗದ ವಿಕಾಸ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿದ್ದ 2026-27ನೇ ಸಾಲಿನ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ವೇಟ್ ಲಿಫ್ಟಿಂಗ್ ಪಂದ್ಯಾವಳಿಯನ್ನು ಶಾಸಕ ಎಸ್.ಎನ್. ಚನ್ನಬಸಪ್ಪ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ದೃಢ ಸಂಕಲ್ಪದೊಂದಿಗೆ ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಂಡು ರಾಷ್ಟ್ರೀಯ, ಅಂತರರಾಷ್ಟ್ರೀಯ ಹಾಗೂ ಒಲಿಂಪಿಕ್ಸ್ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಬೇಕು ಎಂದು ಕರೆ ನೀಡಿದರು.

ಈ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 185 ಕ್ರೀಡಾಪಟುಗಳು ಭಾಗವಹಿಸಿದ್ದು, ಬಾಲಕಿಯರೂ ಸಹ ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ಮುಂದಿನ ಯುವ ದಸರಾದಲ್ಲಿಯೂ ವೇಟ್‌ಲಿಫ್ಟಿಂಗ್ ಪಂದ್ಯಾವಳಿ ಆಯೋಜಿಸಲಾಗುವುದು ಎಂದು ತಿಳಿಸಿದರು.

ಇ ಪೇಪರ್​ನಲ್ಲಿರುವ ಪ್ರಮುಖ ಸುದ್ದಿಗಳು ಬ್ರೇಕಿಂಗ್​ ಪಾಯಿಂಟ್ಸ್​​

ಗಣಪತಿ ಮೆರವಣಿಗೆಗೆ ಶಿವಮೊಗ್ಗ ಸಜ್ಜು – ಗಮನಸೆಳೆಯುತ್ತಿರುವ ಬೃಹತ್ ಕಲಾಕೃತಿಗಳು: 

ಗಣೇಶೋತ್ಸವದ ವಿಸರ್ಜನಾ ಪೂರ್ವ ಮೆರವಣಿಗೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಪ್ರಮುಖ ವೃತ್ತಗಳಲ್ಲಿ ಪಂಚಮುಖಿ ಆಂಜನೇಯ, ಶಿವಾಜಿ ಮಹಾರಾಜರು, ಜಗನ್ನಾಥ ಸ್ವಾಮಿ ರಥ ಹಾಗೂ ಸಮುದ್ರ ಮಂಥನದಂತಹ ಬೃಹತ್ ಧಾರ್ಮಿಕ ಹಾಗೂ ಐತಿಹಾಸಿಕ ಕಲಾಕೃತಿಗಳನ್ನು ನಿರ್ಮಿಸಲಾಗಿದ್ದು, ಸಾರ್ವಜನಿಕರ ಆಕರ್ಷಣೆಯ ಕೇಂದ್ರವಾಗಿವೆ.

ದಿವಾಳಿಯಾಗಿದೆ ಕಾಂಗ್ರೆಸ್ ಸರ್ಕಾರ – ಖಾಲಿ ಚೊಂಬು ಪ್ರದರ್ಶಿಸಿ ಬಿಜೆಪಿ ಬೃಹತ್ ಪ್ರತಿಭಟನೆ: 

ರಾಜ್ಯ ಸರ್ಕಾರ ಹಣಕಾಸಿನ ಅಭಾವದಿಂದ ದಿವಾಳಿಯಾಗಿದೆ ಎಂದು ಆರೋಪಿಸಿ ಶಿವಮೊಗ್ಗದ ಗೋಪಿ ವೃತ್ತದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಿಎಂ ಹಾಗೂ ಡಿ.ಕೆ. ಶಿವಕುಮಾರ್ ಅವರ ಪ್ರತಿಕೃತಿಗೆ ಎಳ್ಳು-ನೀರು ಬಿಟ್ಟು, ಖಾಲಿ ಚೊಂಬು ಪ್ರದರ್ಶಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಲಾಯಿತು.

ಒತ್ತಡ ನಿವಾರಣೆಗೆ ಆಯುರ್ವೇದ ಜೀವನಶೈಲಿ ಅಳವಡಿಸಿಕೊಳ್ಳಿ – ಸಂಸದ ಬಿ.ವೈ. ರಾಘವೇಂದ್ರ: 

ಶಿವಮೊಗ್ಗದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ನಡೆದ 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯಲ್ಲಿ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ಆಧುನಿಕ ಜೀವನಶೈಲಿಯ ಮಾನಸಿಕ ಒತ್ತಡ ನಿವಾರಣೆಗೆ ಆಯುರ್ವೇದ ಸೂಕ್ತ ಪರಿಹಾರ ಎಂದರು. ಹಾಗೆಯೇ ಶಿವಮೊಗ್ಗದಲ್ಲಿ ‘ಆಯುರ್ವೇದ, ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಸಂಶೋಧನಾ ಪ್ರಾದೇಶಿಕ ಕೇಂದ್ರ’ ಸ್ಥಾಪಿಸಲು ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ನ್ಯಾಯಾಲಯದ ಕಲಾಪ ವೀಕ್ಷಿಸಿದ ಕಮಲಾ ನೆಹರು ಕಾಲೇಜಿನ 49 ವಿದ್ಯಾರ್ಥಿನಿಯರು:

 ಕಾನೂನಿನ ಮಹತ್ವ ಹಾಗೂ ನ್ಯಾಯಾಲಯದ ಕಾರ್ಯವಿಧಾನವನ್ನು ಪ್ರತ್ಯಕ್ಷವಾಗಿ ತಿಳಿದುಕೊಳ್ಳಲು ಕಮಲಾ ನೆಹರು ಮಹಿಳಾ ಕಾಲೇಜಿನ 49 ವಿದ್ಯಾರ್ಥಿನಿಯರು ಶಿವಮೊಗ್ಗ ನ್ಯಾಯಾಲಯಕ್ಕೆ ಶೈಕ್ಷಣಿಕ ಭೇಟಿ ನೀಡಿದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ಜಿ.ಎ. ಅವರು ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ ಕಾನೂನು ಅರಿವು ಮೂಡಿಸಿದರು.

ಸೆ.25ರಿಂದ ಜಿಲ್ಲೆಯಾದ್ಯಂತ ಸಿಐಟಿಯು ಪ್ರತಿಭಟನೆ: 

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ಸೆಪ್ಟೆಂಬರ್ 25ರಿಂದ ಶಿವಮೊಗ್ಗ ನಗರ ಹೊರತುಪಡಿಸಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಪ್ರತಿಭಟನೆ ನಡೆಸಲಿದೆ.

ಈ ಮೇಲಿನ ಎಲ್ಲಾ ಸುದ್ದಿಗಳ ಸಂಪೂರ್ಣ ವಿವರ ತಿಳಿದುಕೊಳ್ಳಲು (ಇ-ಲಿಂಕ್)​ ಕ್ಲಿಕ್​ ಮಾಡಿ 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor