ಮಲೆನಾಡು ಟುಡೆ ಹವಾಮಾನ ವರದಿ! ಮಳೆ ಬರುವ ಹಾಗಿದೆ! ಯಾವಾಗ ಗೊತ್ತಾ?

Malenadu Weather Report Today! It's raining! Do you know when?

ಮಲೆನಾಡು ಟುಡೆ ಹವಾಮಾನ ವರದಿ! ಮಳೆ ಬರುವ ಹಾಗಿದೆ! ಯಾವಾಗ ಗೊತ್ತಾ?
Malenadu Today Weather Report

Shivamogga  Apr 4, 2024  Malenadu Today Weather Report ನಿನ್ನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ವರ್ಷದ ಮೊದಲ ಮಳೆಯಾಗಿದೆ. ಸೆಕೆಯ ಉರಿಗೆ ಬೇಸತ್ತ ಜನರಿಗೆ ತುಸು ತಂಪನೆರದ ವರುಣ ಈ ವರ್ಷ ಬಹಳ ನಿರೀಕ್ಷೆಯಲ್ಲಿದ್ದಾನೆ. ಡ್ರೈ ಡೇಗಳು ಅಡಿಕೆ ತೋಟಗಳನ್ನ ಒಣಗಿಸುತ್ತಿರುವುದಷ್ಟೆ ಅಲ್ಲದೆ ಜೀವಿಗಳಲ್ಲಿ ಹಾಹಾಕಾರ ಉಂಟು ಮಾಡುತ್ತಿದೆ. ಹೀಗಾಗಿ ವರ್ಷಧಾರೆ ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ಬರಲಿ ಎಂದು ಜನರು ನಿರೀಕ್ಷಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಹವಾಮಾನ ಇಲಾಖೆ ಯುಗಾದಿ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಾಗುವ ಸೂಚನೆಯನ್ನು ನೀಡಿದೆ. 

ಕೆಎಸ್‌ಎನ್‌ಡಿಎಂಸಿ ಬಿಡುಗಡೆ ಮಾಡುವ ಮುನ್ಸೂಚನೆಯ ಪಟ್ಟಿಯಲ್ಲಿ ಏಳನೇ ತಾರೀಖಿನಿಂದ ಶಿವಮೊಗ್ಗದಲ್ಲಿ ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸೂಚನೆ ನೀಡಲಾಗಿದೆ. ಅಲ್ಲಿವರೆಗೂ ಶಿವಮೊಗ್ಗದಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ತಿಳಿಸಲಾಗಿದೆ. 

ಹವಾಮಾನ ವರದಿ/ Weather report

ಇನ್ನೂ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್‌  ಹೀಗಿದೆ.  04ನೇ ಏಪ್ರಿಲ್ 2024 ರಿಂದ 05ನೇ ಏಪ್ರಿಲ್ 2024: ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ.

06ನೇ ಏಪ್ರಿಲ್ 2024: ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಮತ್ತು ಹಾಸನ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

07ನೇ ಏಪ್ರಿಲ್ 2024: ದಕ್ಷಿಣ ಕನ್ನಡ, ಉಡುಪಿ, ಬೀದರ್, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

08ನೇ ಏಪ್ರಿಲ್ 2024: ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರ್ಗಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

09ನೇ ಏಪ್ರಿಲ್ 2024: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಯಾದಗಿರಿ, ಹಾವೇರಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ಮಂಡ್ಯ, ಮೈಸೂರು, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

10ನೇ ಏಪ್ರಿಲ್ 2024: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.