ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಏಕವಚನದಲ್ಲಿ ಮಾತನಾಡಿ ಅಸಂಸ್ಕೃತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ಹಾಗೂ ಶಿಕಾರಿಪುರ ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ನಾಗರಾಜ್ ಗೌಡ, ಸಂಸದರು ತಕ್ಷಣವೇ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ಶಿವಮೊಗ್ಗದ ಪ್ರೆಸ್ ಟ್ರಸ್ಟ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ವ್ಯಾಪ್ತಿಗೆ ಒಳಪಟ್ಟ ಶಿಕಾರಿಪುರ ತಾಲೂಕಿನ 12 ಹಳ್ಳಿಗಳ ರೈತರ ಪರವಾಗಿ ಸಚಿವ ಮಧು ಬಂಗಾರಪ್ಪ ಪಾದಯಾತ್ರೆ ನಡೆಸಿ ಧ್ವನಿಯೆತ್ತಿದ್ದರು. ಆದರೆ ಸೆಪ್ಟೆಂಬರ್ 18ರಂದು ನಡೆದ ಬಿಜೆಪಿ ಸಭೆಯಲ್ಲಿ ಸಂಸದರು ಸಚಿವರ ವಿರುದ್ಧ ಏಕವಚನ ಬಳಸಿ ಸಾರ್ವಜನಿಕವಾಗಿ ನಿಂದಿಸಿದ್ದಾರೆ. ಇದು ಅವರ ಸಂಸ್ಕೃತಿಯನ್ನು ಎತ್ತಿಹಿಡಿಯುತ್ತದೆ. ಸಂಸದರು ಕ್ಷಮೆ ಕೇಳದಿದ್ದರೆ ಅವರ ಮನೆಗೆ ಕಾಂಗ್ರೆಸ್‌ನಿಂದ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದ್ದಾರೆ.
ಶಿವಮೊಗ್ಗ ಐಸಿಸ್ ಉಗ್ರ ಸಂಚು ಪ್ರಕರಣ: ಆರೋಪಿ ಹುಜೈರ್ ಫರ್ಹಾನ್ ಬೇಗ್‌ಗೆ 6 ವರ್ಷ ಜೈಲು ಶಿಕ್ಷೆ!
ಶಿವಮೊಗ್ಗದ 2022ರ ಐಸಿಸ್ ಉಗ್ರ ಸಂಚು ಪ್ರಕರಣದಲ್ಲಿ ಆನ್‌ಲೈನ್ ಮೂಲಕ ಶಂಕಿತರಿಗೆ ತರಬೇತಿ ಹಾಗೂ ಕ್ರಿಪ್ಟೋಕರೆನ್ಸಿ ಮೂಲಕ ಹಣದ ನೆರವು ಒದಗಿಸುತ್ತಿದ್ದ ಟಿಪ್ಪು ಸುಲ್ತಾನ್ ನಗರದ ಹುಜೈರ್ ಫರ್ಹಾನ್ ಬೇಗ್‌ಗೆ ಎನ್‌ಐಎ (NIA) ವಿಶೇಷ ನ್ಯಾಯಾಲಯವು 6 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹58,000 ದಂಡ ವಿಧಿಸಿದೆ.
ಶಿವಮೊಗ್ಗದಲ್ಲಿ ನೆಹರೂ ರಸ್ತೆಯಲ್ಲಿ ತಹಶೀಲ್ದಾರ್ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ ಐ20 ಕಾರು; ಚಾಲಕನಿಂದ ರೋಡ್ ಹೈಡ್ರಾಮಾ!
ತೀರ್ಥಹಳ್ಳಿ ತಹಶೀಲ್ದಾರ್ ಬಳಕೆಯ ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ ಐ20 ಕಾರನ್ನು ಜಿಲ್ಲಾಧಿಕಾರಿ ಕಚೇರಿ ಬಳಿ ತಡೆದು ನಿಲ್ಲಿಸಲಾಗಿದೆ. ಕಾರಿನಿಂದ ಕೆಳಗಿಳಿಯಲು ನಿರಾಕರಿಸಿದ ಚಾಲಕ ತನ್ನ ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಿ ರಸ್ತೆಯಲ್ಲೇ ಹೈಡ್ರಾಮಾ ಸೃಷ್ಟಿಸಿದ್ದಾನೆ.
ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್ ಸ್ಥಾಪನೆಗೆ ಆಗ್ರಹಿಸಿ ಸೆಪ್ಟೆಂಬರ್ 24ರಿಂದ ಅಂಚೆಕಾರ್ಡ್ ಚಳವಳಿ!
2008ರ ಕ್ಷೇತ್ರ ಪುನರ್ವಿಂಗಡಣೆಯಲ್ಲಿ ರದ್ದಾದ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ತಾಲೂಕಿನ ಸಮಗ್ರ ಅಭಿವೃದ್ಧಿ ಹಾಗೂ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕಾಗಿ ಪುನರ್ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಸರ್ವೋದಯ ಮಂಡಲದಿಂದ ಸೆ.24ರಿಂದ ಬೃಹತ್ ಅಂಚೆಕಾರ್ಡ್ ಚಳವಳಿ ಆರಂಭಿಸಲಾಗುತ್ತಿದೆ.
ಆನಂದಪುರ-ಶಿಕಾರಿಪುರ ರಾಜ್ಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಭೀಕರ ಡಿಕ್ಕಿ: ಯುವಕ ದುರ್ಮರಣ
ದಾಸಕೊಪ್ಪ ಗ್ರಾಮದ ಮಸೀದಿ ಸಮೀಪ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಾಸಕೊಪ್ಪ ನಿವಾಸಿ ಮೊಹಮ್ಮದ್ ಸಿದ್ದಿಕ್ ಎಂಬ ಯುವಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ.
ಭದ್ರಾವತಿಯಲ್ಲಿ 54ನೇ ವರ್ಷದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಗೆ ಚಾಲನೆ; ಸಂಸದ ಬಿ.ವೈ. ರಾಘವೇಂದ್ರ ಭಾಗಿ
ಭದ್ರಾವತಿಯ ಹೊಸಮನೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿಯ 9 ದಿನಗಳ ಉತ್ಸವದ ಬಳಿಕ ರಾಜಬೀದಿ ವಿಸರ್ಜನಾ ಮೆರವಣಿಗೆ ಆರಂಭಗೊಂಡಿದ್ದು, ಸಂಸದ ಬಿ.ವೈ. ರಾಘವೇಂದ್ರ ಅವರು ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು.
ಈ ಮೇಲಿನ ಎಲ್ಲಾ ಸುದ್ದಿಗಳ ಸಂಪೂರ್ಣ ವಿವರ (ಇ ಲಿಂಕ್) ನಲ್ಲಿದೆ
