ಶಿವಮೊಗ್ಗ : ಹಿಂದೂ ಮಹಾಸಭಾ ಗಣೇಶೋತ್ಸವ, ಹೆಚ್​ ಎಸ್​ ಸುಂದರೇಶ್​​ಗೆ ಶೋಕಾಸ್​​ ನೋಟಿಸ್​ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​​ನಲ್ಲಿ

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಸ್ವಪಕ್ಷದ ನಾಯಕರ ವಿರುದ್ಧವೇ ಬಹಿರಂಗವಾಗಿ ಆಕ್ಷೇಪಾರ್ಹ ಪದ ಬಳಸಿ ವಾಗ್ದಾಳಿ ನಡೆಸಿದ್ದ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಸೆಪ್ಟೆಂಬರ್ 23ರಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸುಂದರೇಶ್ ಅವರು, ಕಾಂಗ್ರೆಸ್ ಪಕ್ಷದ ‘ಸಂಘಟನಾ ಸೃಜನ್ ಅಭಿಯಾನ’ ಹಾಗೂ ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದರು. 40 ವರ್ಷಗಳಿಂದ ಪಕ್ಷದಲ್ಲಿ ದುಡಿದರೂ ತಮಗೆ ಸೂಕ್ತ ಮಾನ್ಯತೆ, ಶಾಸಕ ಸ್ಥಾನ ಅಥವಾ ಲೋಕಸಭಾ ಟಿಕೆಟ್ ಸಿಗಲಿಲ್ಲ ಎಂದು ಬಹಿರಂಗವಾಗಿ ಕಿಡಿಕಾರಿದ್ದರು. ಈ ಹೇಳಿಕೆಗಳು ಪಕ್ಷಕ್ಕೆ ಹಾಗೂ ಸ್ಥಳೀಯ ನಾಯಕರಿಗೆ ತೀವ್ರ ಮುಜುಗರ ಉಂಟುಮಾಡಿದ್ದ ಹಿನ್ನೆಲೆಯಲ್ಲಿ, ನಾಯಕರ ದೂರಿನ ಮೇರೆಗೆ ಕೆಪಿಸಿಸಿ ಶೋಕಾಸ್ ನೋಟಿಸ್ ನೀಡಿದ್ದು, 7 ದಿನಗಳ ಒಳಗೆ ಸೂಕ್ತ ಸಮಜಾಯಿಷಿ ನೀಡದಿದ್ದರೆ ಮುಂದಿನ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಸಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಡಿಸಿಸಿ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ ಪ್ರತಿಕ್ರಿಯಿಸಿ, “ಸುಂದರೇಶ್ ಅವರು ಮಾನಸಿಕವಾಗಿ ಕುಗ್ಗಿದ್ದಾರೆ ಹಾಗೂ ಡಿಪ್ರೆಷನ್‌ನಲ್ಲಿದ್ದಾರೆ. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಪಿ ಡಿ ಎಫ್​​​ನಲ್ಲಿರುವ ಪ್ರಮುಖ ಸುದ್ದಿಗಳು

ಶಿಕಾರಿಪುರ: ₹1 ಲಕ್ಷ ಲಂಚ ಪಡೆಯುತ್ತಿದ್ದ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಲೋಕಾಯುಕ್ತ ಬಲೆಗೆ!

ಶಿಕಾರಿಪುರದ ಖಾಸಗಿ ಶಾಲೆಯ ನೂತನ ಕಟ್ಟಡಕ್ಕೆ ನಿರಾಕ್ಷೇಪಣಾ ಪ್ರಮಾಣಪತ್ರ (NOC) ನೀಡಲು ₹1 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ರೆಡ್‌ಹ್ಯಾಂಡ್‌ ಆಗಿ ವಶಕ್ಕೆ ಪಡೆದಿದ್ದಾರೆ.

ಚಿತ್ರದುರ್ಗ: ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರ – ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆ!

ನಮ್ಮಲ್ಲಿಯೂ ನೀರಿನ ಅಭಾವವಿದ್ದು, ಕೆಆರ್‌ಎಸ್ ಹಾಗೂ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಒಳಹರಿವು ಕಡಿಮೆಯಾಗಿದೆ. ನೀರಿದ್ದರೆ ಮಾತ್ರ ಬಿಡಲು ಸಾಧ್ಯ. ಹೀಗಾಗಿ ಕಾವೇರಿ ನೀರು ಬಿಡುವ ವಿಚಾರವಾಗಿ ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗ: ಬ್ಯಾಂಕ್ ಮುಷ್ಕರದ ಹಿನ್ನೆಲೆ ಸೆಪ್ಟೆಂಬರ್ 27ರಂದು ಎಲ್ಲ ಬ್ಯಾಂಕ್‌ಗಳು ಓಪನ್!

ಬ್ಯಾಂಕ್ ಸಂಘಗಳ ಸಂಯುಕ್ತ ವೇದಿಕೆ (UFBU) ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ತೊಂದರೆಯಾಗದಂತೆ ಸೆಪ್ಟೆಂಬರ್ 27ರಂದು ಜಿಲ್ಲೆಯ ಎಲ್ಲಾ ಬ್ಯಾಂಕ್ ಶಾಖೆಗಳನ್ನು ತೆರೆಯಲು ಆರ್‌ಬಿಐ ಅನುಮೋದನೆ ನೀಡಿದೆ ಎಂದು ಲೀಡ್ ಬ್ಯಾಂಕ್ ಅಧಿಕಾರಿ ಹನುಮಂತಪ್ಪ ತಿಳಿಸಿದ್ದಾರೆ.

ಬೆಂಗಳೂರು: ಸೆ.26 ರಿಂದ 30 ರವರೆಗೆ ಅರಮನೆ ಮೈದಾನದಲ್ಲಿ ‘ಕರ್ನಾಟಕ ಪರ್ವ-2026’ ಮೇಳ!

ಅಲ್ಪಸಂಖ್ಯಾತ ಸಮುದಾಯದ ಕುಶಲಕರ್ಮಿಗಳ ಕರಕುಶಲ ಉತ್ಪನ್ನಗಳು ಮತ್ತು ಉದ್ಯಮಶೀಲತೆಗೆ ಉತ್ತೇಜನ ನೀಡಲು ಬೆಂಗಳೂರಿನ ಅರಮನೆ ಮೈದಾನದ ‘ತ್ರಿಪುರ ವಾಸಿನಿ’ಯಲ್ಲಿ ‘ಕರ್ನಾಟಕ ಪರ್ವ-2026’ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದ್ದು, 180ಕ್ಕೂ ಹೆಚ್ಚು ಸ್ಟಾಲ್‌ಗಳು ಇರಲಿವೆ.

ಸಾಗರ: ಪಂಪ್‌ಸೆಟ್ ಹಾಗೂ ವಿದ್ಯುತ್ ತಂತಿ ಕಳ್ಳತನ ಹೆಚ್ಚಳ – ಆರೋಪಿಗಳ ಬಂಧನಕ್ಕೆ ಆಗ್ರಹ!

ಸಾಗರ ತಾಲ್ಲೂಕಿನ ಕಲ್ಪನೆ ಹಾಗೂ ಭೀಮನಕೋಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟಗಳಲ್ಲಿ ತಿಂಗಳಿನಲ್ಲಿ 25ಕ್ಕೂ ಹೆಚ್ಚು ಪಂಪ್‌ಸೆಟ್‌ಗಳು ಹಾಗೂ ಕೇಬಲ್ ತಂತಿ ಕಳ್ಳತನವಾಗುತ್ತಿದ್ದು, ತಕ್ಷಣವೇ ಕಳ್ಳರನ್ನು ಪತ್ತೆಹಚ್ಚಿ ಬಂಧಿಸುವಂತೆ ಸಾರ್ವಜನಿಕರು ಹಾಗೂ ರೈತ ಮುಖಂಡರು ಡಿವೈಎಸ್ಪಿಗೆ ಮನವಿ ಸಲ್ಲಿಸಿದ್ದಾರೆ.

ಈ ಮೇಲಿನ ಸುದ್ದಿಗಳ ಸಂಪೂರ್ಣ ವಿವರಗಳನ್ನು ತಿಳಿದುಕೊಳ್ಳಲು (ಇ-ಲಿಂಕ್​​) ಕ್ಲಿಕ್​ ಮಾಡಿ

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor