ಭಾರತ್ ಜೋಡೋ 2.0′ ಪಾದಯಾತ್ರೆಗೆ ಕಾಂಗ್ರೆಸ್ ಸಿದ್ಧತೆ: ಸೆ. 30ರಂದು ಶಿಕಾರಿಪುರದಲ್ಲಿ ಬೃಹತ್ ಸಮಾವೇಶ
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ಯಾತ್ರೆ’ ಕರ್ನಾಟಕ ಪ್ರವೇಶಿಸಿ ನಾಲ್ಕು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 30ರಂದು ಶಿಕಾರಿಪುರದಲ್ಲಿ ಕಾಂಗ್ರೆಸ್ ವತಿಯಿಂದ ಬೃಹತ್ ಪಾದಯಾತ್ರೆ ಹಾಗೂ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮೌಲ್ಯಗಳನ್ನು ಸ್ಮರಿಸುವ ಮತ್ತು ಪಕ್ಷದ ಸಂಘಟನೆಗೆ ಮತ್ತಷ್ಟು ಶಕ್ತಿ ತುಂಬುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಪಕ್ಷದ ಆಂತರಿಕ ಗೊಂದಲಗಳ ಕುರಿತು ಪ್ರತಿಕ್ರಿಯಿಸಿದ ಅವರು, “ಪಕ್ಷದ ನಾಲ್ಕು ಗೋಡೆಗಳ ಮಧ್ಯೆ ಹಲವು ವಿಚಾರಗಳು ನಡೆಯುತ್ತವೆ. ಆದರೆ ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲವಿಲ್ಲ, ನಾವೆಲ್ಲರೂ ಒಗ್ಗಟ್ಟಾಗಿ ಪಕ್ಷಕ್ಕಾಗಿ ದುಡಿಯುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ, ಚುನಾವಣಾ ವ್ಯವಸ್ಥೆಯ ಪಾವಿತ್ರ್ಯತೆಯನ್ನು ಕಾಪಾಡುವಲ್ಲಿ ಲೋಪವೆಸಗಿದ್ದಾರೆ ಎಂದು ಆರೋಪಿಸಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಸಚಿವರು ಆಗ್ರಹಿಸಿದರು.
ಪಿ ಡಿ ಎಫ್ನಲ್ಲಿರುವ ಪ್ರಮುಖ ಸುದ್ದಿಗಳ ಬ್ರೇಕಿಂಗ್ ಪಾಯಿಂಟ್ಸ್
ಸಕ್ರೆಬೈಲು ಆನೆ ಬಿಡಾರ ಪುನರಾರಂಭ: ಹೊಸ ಸುರಕ್ಷತಾ ಮಾರ್ಗಸೂಚಿಗಳೊಂದಿಗೆ ಪ್ರವಾಸಿಗರಿಗೆ ಮುಕ್ತ
ದುಬಾರೆ ಆನೆ ಶಿಬಿರದಲ್ಲಿ ಸಂಭವಿಸಿದ ದುರ್ಘಟನೆಯ ನಂತರ ಬಂದ್ ಮಾಡಲಾಗಿದ್ದ ಶಿವಮೊಗ್ಗದ ಪ್ರಸಿದ್ಧ ಸಕ್ರೆಬೈಲು ಆನೆ ಬಿಡಾರವನ್ನು, ಅಗತ್ಯ ಸುರಕ್ಷತಾ ಕ್ರಮಗಳು ಹಾಗೂ ಹೊಸ ನಿಯಮಗಳನ್ನು ಜಾರಿಗೊಳಿಸಿದ ಬಳಿಕ ಸೆಪ್ಟೆಂಬರ್ 26ರಿಂದ ಪ್ರವಾಸಿಗರ ವೀಕ್ಷಣೆಗೆ ಪುನಃ ಮುಕ್ತಗೊಳಿಸಲಾಗಿದೆ.
ಶಿವಮೊಗ್ಗ ನವುಲೆ ಕೆಎಸ್‌ಸಿಎ ಮೈದಾನದಲ್ಲಿ ₹4.90 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ
ಮಳೆಗಾಲದಲ್ಲೂ ನಿರಂತರ ಕ್ರಿಕೆಟ್ ಅಭ್ಯಾಸಕ್ಕೆ ಅನುಕೂಲವಾಗುವಂತೆ ನವುಲೆ ಮೈದಾನದಲ್ಲಿ ₹4.90 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಒಳಾಂಗಣ ಕ್ರೀಡಾಂಗಣ ನಿರ್ಮಿಸಲಾಗುತ್ತಿದ್ದು, ಸೆಪ್ಟೆಂಬರ್ 29ರಂದು ಶಂಕುಸ್ಥಾಪನೆ ನೆರವೇರಲಿದೆ. ಭವಿಷ್ಯದಲ್ಲಿ ಇಲ್ಲಿ ರಾತ್ರಿ ಪಂದ್ಯಗಳಿಗಾಗಿ ಫ್ಲಡ್‌ಲೈಟ್ ವ್ಯವಸ್ಥೆ ಕಲ್ಪಿಸಿ ‘ಮಹಾರಾಜ ಟ್ರೋಫಿ’ ಆಯೋಜಿಸುವ ಯೋಜನೆಯಿದೆ ಎಂದು ಕೆಎಸ್‌ಸಿಎ ನಿರ್ದೇಶಕ ಡಿ.ಎಸ್. ಅರುಣ್ ತಿಳಿಸಿದ್ದಾರೆ.
ಶೂಟಿಂಗ್‌ನಲ್ಲಿ ಭಾರತಕ್ಕೆ 2 ಬೆಳ್ಳಿ ಪದಕ ಗೆದ್ದ ಹಿಮಾಂಶು ಧಿಲ್ಲೋನ್: ಕೃಷಿಕ ತಂದೆಯ ತ್ಯಾಗಕ್ಕೆ ಒಲಿದ ಫಲ
ಜಪಾನ್‌ನ ನಗೋಯಾದಲ್ಲಿ ನಡೆದ 10 ಮೀಟರ್ ಏರ್ ರೈಫಲ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿ 2 ಬೆಳ್ಳಿ ಪದಕ ಗೆದ್ದ ಹಿಮಾಂಶು ಧಿಲ್ಲೋನ್ ಸಾಧನೆಯ ಹಿಂದೆ ಅವರ ತಂದೆ ಶಂಶೇರ್ ಸಿಂಗ್ (ರೈತ) ಅವರ ಸಾಲ ಮಾಡಿ ರೈಫಲ್ ಕೊಡಿಸಿದ ಶ್ರಮ ಹಾಗೂ ತ್ಯಾಗದ ಕಥೆ ಪ್ರೇರಣಾದಾಯಿಯಾಗಿದೆ.
ಸಾರ್ವಜನಿಕರ ಸಮಸ್ಯೆ ಸಕಾಲಕ್ಕೆ ಇತ್ಯರ್ಥವಾಗದಿರುವುದೇ ನಕ್ಸಲ್ ಸಮಸ್ಯೆಗೆ ಮೂಲ ಕಾರಣ’: ಶಾಸಕ ಆರಗ ಜ್ಞಾನೇಂದ್ರ
ಕೋಣಂದೂರಿನಲ್ಲಿ ನಡೆದ ‘ಪ್ರಜಾಸೇವೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ, ಆಡಳಿತ ವ್ಯವಸ್ಥೆಯಲ್ಲಿ ಜನರ ಸಮಸ್ಯೆಗಳು ವಿಳಂಬವಾದಾಗ ಹತಾಶೆಗೊಳ್ಳುತ್ತಾರೆ, ಇದು ನಕ್ಸಲ್ ಸಮಸ್ಯೆ ಹುಟ್ಟಿಕೊಳ್ಳಲು ಕಾರಣವಾಗುತ್ತದೆ ಎಂದು ಹೇಳಿದ್ದು, ಸರ್ಕಾರಿ ನೌಕರರು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದ್ದಾರೆ.
ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗ ಹೇಳಿಕೆ: ಸುಂದರೇಶ್‌ರನ್ನು ಪಕ್ಷದಿಂದ ಉಚ್ಚಾಟಿಸಲು ಕೆಪಿಸಿಸಿಗೆ ಮನವಿ
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಅವರು ಪಕ್ಷದ ಹಿರಿಯ ನಾಯಕರು ಹಾಗೂ ಸಚಿವರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿ ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ, ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಕಾಂಗ್ರೆಸ್ ಮುಖಂಡ ಎಂ. ಕುಮಾರ್ ಒತ್ತಾಯಿಸಿದ್ದಾರೆ.
ಈ ಮೇಲಿನ ಎಲ್ಲಾ ಸುದ್ದಿಗಳ ಸಂಪೂರ್ಣ ವಿವರಗಳು (ಇಲಿಂಕ್) ನಲ್ಲಿದೆ
