ಶಿವಮೊಗ್ಗ : ಹೆಚ್​​ ಎಸ್​ ಸುಂದರೇಶ್​​ರಿಗೆ 3 ದಿನಗಳ ಗಡುವು, SIR ವಿರುದ್ದ ಆರೋಪ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

SIR ಮೂಲಕ ಮತದಾರರ ಹೆಸರು ಕೈಬಿಡುವ ಆತಂಕ: ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಆಕ್ಷೇಪ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೂಲಕ ಕಾಂಗ್ರೆಸ್ ಬೆಂಬಲಿತ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಯತ್ನ ನಡೆಯುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಹೆಸರಿನಲ್ಲಿ ಕನ್ನಡ ಹಾಗೂ ಇಂಗ್ಲಿಷ್ ಅಕ್ಷರಗಳ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ ಅದನ್ನೇ ನೆಪ ಮಾಡಿಕೊಂಡು ಹೆಸರು ಕೈಬಿಡಬಾರದು ಎಂದು ಒತ್ತಾಯಿಸಿದರು. ಸರ್ಕಾರದ ಸಾಧನೆಗಳನ್ನು ಬೂತ್ ಮಟ್ಟಕ್ಕೆ ತಲುಪಿಸಲು ಸೆ.30ರಂದು ಶಿಕಾರಿಪುರದಲ್ಲಿ ‘ಭಾರತ್ ಜೋಡೋ-2’ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದೂ ಅವರು ತಿಳಿಸಿದರು.

ಪಿ ಡಿ ಎಫ್​​​ನಲ್ಲಿರುವ ಪ್ರಮುಖ ಸುದ್ದಿಗಳ ಬ್ರೇಕಿಂಗ್​ ಪಾಯಿಂಟ್ಸ್​​​ಗಳು

ಕುರುಬ ಸಮುದಾಯದ ಕ್ಷಮೆಗೆ ಆಗ್ರಹಿಸಿ ಪ್ರತಿಭಟನೆ 

ಮಾಜಿ MLC ಆರ್. ಪ್ರಸನ್ನಕುಮಾರ್ ಕುರಿತು ಮಾತನಾಡುವಾಗ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ, SUDA ಅಧ್ಯಕ್ಷ ಎಸ್.ಎಸ್. ಸುಂದರೇಶ್ ವಿರುದ್ಧ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಹಾಗೂ ಕುರುಬ ಸಮಾಜದವರು ಶಿವಮೊಗ್ಗದಲ್ಲಿ ಭಾರಿ ಪ್ರತಿಭಟನೆ ನಡೆಸಿ, 3 ದಿನಗಳಲ್ಲಿ ಕ್ಷಮೆ ಕೇಳದಿದ್ದರೆ ಮನೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ್ದಾರೆ.

25 ಲಕ್ಷ ಲಂಚದ ಆರೋಪ – ಮಧು ಬಂಗಾರಪ್ಪ ರಾಜೀನಾಮೆಗೆ ಆಗ್ರಹ: 

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಚೇರಿಯಲ್ಲಿ ನಡೆದಿದೆ ಎನ್ನಲಾದ ₹25 ಲಕ್ಷ ಲಂಚದ ಆರೋಪ ಗಂಭೀರವಾದುದು. ಈ ಬಗ್ಗೆ ಲೋಕಾಯುಕ್ತ ತನಿಖೆಯಾಗಬೇಕು ಮತ್ತು ಸಚಿವ ಮಧು ಬಂಗಾರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಒತ್ತಾಯಿಸಿದ್ದಾರೆ.

ಅಂಕಪಟ್ಟಿಯಲ್ಲಿ Absent-ಅನುತ್ತೀರ್ಣ’: 250ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಆತಂಕ: 

ಸಾಗರದ ಇಂದಿರಾ ಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉತ್ತೀರ್ಣರಾಗಿದ್ದರೂ ಕುವೆಂಪು ವಿಶ್ವವಿದ್ಯಾಲಯದ ಲೋಪದಿಂದಾಗಿ 250ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಅಂಕಪಟ್ಟಿಯಲ್ಲಿ ‘Absent’ ಹಾಗೂ ‘ಅನುತ್ತೀರ್ಣ’ ಎಂದು ದಾಖಲಾಗಿದ್ದು, ಭವಿಷ್ಯದ ಕುರಿತು ಆತಂಕ ಎದುರಾಗಿದೆ.

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ದೈಹಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ: ರಾಜ್ಯದ 3,991 ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 19,396 ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 5ರವರೆಗೆ ವಲಯವಾರು ದೇಹದಾರ್ಢ್ಯ ಹಾಗೂ ಸಹಿಷ್ಣುತಾ ಪರೀಕ್ಷೆಗಳ (PST/ET) ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಟ್ರಾಫಿಕ್ ದಂಡ ವಿದ್ಯುತ್ ಬಿಲ್‌ಗೆ ಸಂಯೋಜಿಸಲು ಸುಪ್ರೀಂ ಕೋರ್ಟ್ ಸಲಹೆ:

 ದೇಶಾದ್ಯಂತ ಬಾಕಿ ಉಳಿದಿರುವ ಸುಮಾರು ₹20,000 ಕೋಟಿ ರೂಪಾಯಿಗಳ ಇ-ಚಲನ್ ಟ್ರಾಫಿಕ್ ದಂಡವನ್ನು ಪರಿಣಾಮಕಾರಿಯಾಗಿ ವಸೂಲಿ ಮಾಡಲು, ಬಾಕಿ ಮೊತ್ತವನ್ನು ವಾಹನ ಮಾಲೀಕರ ವಿದ್ಯುತ್ ಬಿಲ್‌ಗಳೊಂದಿಗೆ ಸಂಯೋಜಿಸುವ ಪರ್ಯಾಯ ವ್ಯವಸ್ಥೆ ಕುರಿತು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಿದೆ.

ಈ ಮೇಲಿನ ಎಲ್ಲಾ ಸುದ್ದಿಗಳ ಸಂಪೂರ್ಣ ವಿವರ (ಇ-ಲಿಂಕ್​​) ನಲ್ಲಿದೆ

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor