ಶಿವಮೊಗ್ಗ : ಸೋಮಿನಕೊಪ್ಪ, ಒಡ್ಡಿನಕೊಪ್ಪದಲ್ಲಿ ಹಬ್ಬದ ಸಡಗರದ ನಡುವೆ ನಡೀತು 2 ಕ್ರೈಂ ಘಟನೆ!

ajjimane ganesh

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 23 2025 :  ದೀಪಾವಳಿ ಹಿನ್ನೆಲೆ ಶಿವಮೊಗ್ಗದಲ್ಲಿ ಮನೆಗಳ್ಳತನ: ₹80,000 ನಗದು, ಚಿನ್ನಾಭರಣ ಕಳವು

ಶಿಕಾರಿಪುರ : ಶಾಲೆ ಆವರಣದಲ್ಲಿದ್ದ ಮಕ್ಕಳ ಮೇಲೆ ಜೇನು ದಾಳಿ!

- Advertisement -

ಶಿವಮೊಗ್ಗದಲ್ಲಿ ದೀಪಾವಳಿ ಹಬ್ಬದ ಸಡಗರದ ನಡುವೆ ಕಳ್ಳತನವಾಗಿದೆ. ಸಂಬಂಧಿಕರ ಮನೆಗೆ ತೆರಳಿದ್ದ ವೇಳೆಯಲ್ಲಿ ಮನೆಯೊಂದರ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಒಡ್ಡಿನಕೊಪ್ಪ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಇಲ್ಲಿನ ನಿವಾಸಿ ಯಶೋದಮ್ಮ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಕಳ್ಳರು ಬಾಗಿಲಿನ ಬೀಗವನ್ನು ಮುರಿದು ಮನೆಯೊಳಗೆ ಪ್ರವೇಶಿಸಿ, ಬೀರುವಿನಲ್ಲಿದ್ದ ಅಂದಾಜು ₹80,000 ನಗದು, ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ, ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

malnad crime news report along with information
malnad crime news report along with information

ಚಿಕನ್ ಅಂಗಡಿ ಮಾಲೀಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನ

ಇತ್ತ ಸೋಮಿನಕೊಪ್ಪದಲ್ಲಿ ವೈಯಕ್ತಿಕ ದ್ವೇಷಕ್ಕೆ ಚಿಕನ್ ಅಂಗಡಿ ಮಾಲೀಕರೊಬ್ಬರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಲು ಪ್ರಯತ್ನಿಸಿದ ಘಟನೆ ವರದಿಯಾಗಿದೆ.ಇಲ್ಲಿನ ನಿವಾಸಿ ಜೀಶನ್ ಎಂಬವರ ಮೇಲೆ ಪೆಟ್ರೋಲ್​ ಸುರಿದು ಹತ್ಯೆಗೆ ಯತ್ನಿಸಲಾಗಿದೆ.  ವಸೀಂ  ಎಂಬಾತ ಜೀಶನ್​ ಬಳಿ ಬಂದು ಆತನನ್ನು ನಿಂದಿಸಿ, ಪ್ಲಾಸ್ಟಿಕ್ ಕವರ್‌ನಲ್ಲಿ ತಂದಿದ್ದ ಪೆಟ್ರೋಲ್ ಎಸೆದು, ಬೆಂಕಿ ಕೀರಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ.ಸ್ಥಳೀಯರು ಬೆಂಕಿ ನಂದಿಸಿ ಜೀಶನ್​ರನ್ನ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಈ ಸಂಬಂಧ  ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

malnad crime news report along with information
malnad crime news report along with information

ಸಾಗರ ಬಸ್​ ನಿಲ್ದಾಣದ ಬಳಿ ಬ್ರೇಕ್​ ಫೇಲ್! ಬೈಕ್​ಗಳ ಮೇಲೆ ಹರಿದ ಖಾಸಗಿ ಬಸ್​

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

malnad crime news report along with information

Share This Article