ಶಿವಮೊಗ್ಗ ; ಶೆಡ್​​ ಹತ್ರ ಒಬ್ಬನೇ ಇದ್ದ ವ್ಯಕ್ತಿ ಪೊಲೀಸರನ್ನು ನೋಡ್ದಾಗ ಓಡೋಕೆ ಶುರು ಮಾಡ್ದ, ಹಿಡಿದು ಆಸ್ಪತ್ರೇಲಿ ಚೆಕ್​​ ಮಾಡಿಸ್ದಾಗ ತಿಳಿತು ಸತ್ಯ

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

ಮಲೆನಾಡು ಟುಡೆ ಸುದ್ದಿ | ಶಿವಮೊಗ್ಗ: ಗಾಂಜಾ ಸೇವನೆ ಮಾಡಿ ಸಾರ್ವಜನಿಕ ಪ್ರದೇಶದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪಿಯನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ.

ತುಂಗಾನಗರ ಪೊಲೀಸ್ ಸಿಬ್ಬಂದಿ ಗೋಪಾಳದ ಟಿಪ್ಪು ನಗರದ ಬಳಿ ಗಸ್ತು ತಿರುಗುತ್ತಿದ್ದಾಗ, ಖಾಲಿ ಜಾಗದಲ್ಲಿ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸುತ್ತಿರುವುದು ಕಂಡುಬಂದಿದೆ. ಅನುಮಾನಗೊಂಡು ಪೊಲೀಸರು ಆತನ ಬಳಿ ತೆರಳಿದಾಗ, ಪೊಲೀಸರನ್ನು ನೋಡಿದ್ದೇ ತಡ ಆತ ಓಡಲು ಶುರು ಮಾಡಿದ್ದ. ಆತನನ್ನು ಹಿಡಿದ ಪೊಲೀಸರು ಆತನ ಹೆಸರು ಹಾಗೂ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ, ಆತ ಗಾಂಜಾ ಸೇವಿಸಿರಬಹುದು ಎಂಬ ಅನುಮಾನದಿಂದ ಆತನನ್ನು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಅಲ್ಲಿ ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಹಿನ್ನೆಲೆ ಆತನ ಮೇಲೆ ತುಂಗಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor