ಅನೈತಿಕ ಸಂಬಂಧ ಶಂಕೆ: ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ

ಶಿವಮೊಗ್ಗ : ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆಯಿಂದ ಸ್ನೇಹಿತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ತಾಲೂಕಿನ ಬನ್ನಿಕೆರೆ ಗ್ರಾಮದಲ್ಲಿ ನಡೆದಿದೆ. ಶಿವನಾಯಕ್ ಎಂಬಾತ ಹಲ್ಲೆ ನಡೆಸಿದ ಆರೋಪಿಯಾಗಿದ್ದು, ಹರೀಶ್ ನಾಯ್ಕ್ ಗಂಭೀರವಾಗಿ ಗಾಯಗೊಂಡ ವ್ಯಕ್ತಿ.

ಇವತ್ತಿನಿಂದ 3 ದಿನ ಕರೆಂಟ್ ಇರಲ್ಲ! ಶಿವಮೊಗ್ಗ, ಭದ್ರಾವತಿ, ಆನವಟ್ಟಿಯಲ್ಲಿ ಪವರ್ ಕಟ್ ಎಲ್ಲೆಲ್ಲಿ!

Malenadu Today

ಪೊಲೀಸ್ ಮೂಲಗಳಿಂದ ತಿಳಿದು ಬಂದಿರುವ ಪ್ರಕಾರ, ಆರೋಪಿ ಶಿವನಾಯ್ಕ್‌ನ ಪತ್ನಿಯೊಂದಿಗೆ ಹಲ್ಲೆಗೊಳಗಾದ ಹರೀಶ್ ನಾಯ್ಕ್ ಅನೈತಿಕ ಸಂಬಂಧ ಇರಿಸಿಕೊಂಡಿದ್ದನೆಂದು ಹೇಳಲಾಗಿದೆ. ಇದೇ ವಿಚಾರವಾಗಿ ಕೋಪಗೊಂಡಿದ್ದ ಶಿವನಾಯಕ್, ಇಂದು ಬೆಳಿಗ್ಗೆ ಹರೀಶ್ ನಾಯ್ಕ್ ಮೇಲೆ ಮಚ್ಚು ಬೀಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಈ ದಾಳಿಯಿಂದ ಹರೀಶ್ ನಾಯ್ಕ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ತಕ್ಷಣವೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಘಟನೆಯ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

Man Critically Injured in Shivamogga Attack

Malenadu Today