man died in thirthahalli
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ನೊಣಬೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಕಳೆದ ಶನಿವಾರ ವ್ಯಕ್ತಿಯೊಬ್ಬರು ಅಡಿಕೆ ಮರ ಬಿದ್ದಿದ್ದರಿಂದ ಸಾವನ್ನಪ್ಪಿದ್ದಾರೆ. ಖಂಡಕ ಗ್ರಾಮದ ಗಾಗೊಳ್ಳಿ ನಿವಾಸಿ ಲೇಕಪ್ಪ ಗೌಡ (50) ಶನಿವಾರ ಬೆಳಗ್ಗೆ ಅಡಕೆ ಮರ ಬಿದ್ದು ಮೃತಪಟ್ಟಿದ್ದಾರೆ. ಶನಿವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ತೋಟದಲ್ಲಿ ಕಅವರು ಕೆಲಸ ಮಾಡುತ್ತಿದ್ದರು. ಈ ವೇಳೆ ಅವರ ಮೇಲೆ ಅಡಿಕೆ ಮರವೊಂದು ಬಿದ್ದಿದೆ. ಗಂಭೀರ ಗಾಯಗೊಂಡಿದ್ದ ಅವರನ್ನು ತಕ್ಷಣವೇ ತೀರ್ಥಹಳ್ಳಿಯ ಜೆ.ಸಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕರದೊಯ್ಯುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.