Shivamogga | Jan 29, 2024 | Hosanagara ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಹುಂಚ ಸಮೀಪ ಕಬ್ಬಿನ ಲಾರಿ ಪಲ್ಟಿಯಾದ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಇಲ್ಲಿನ ಆನೆಗದ್ದೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ.
ಕಬ್ಬು ತುಂಬಿಕೊಂಡು ಹೋಗುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಈ ವೇಳೆ ಲಾರಿಯಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದರು. ಈ ಪೈಕಿ ಗಣಪತಿ ಶೆಟ್ಟಿ ಎಂಬ ಕಾರ್ಮಿಕರಿಗೆ ಗಂಭೀರ ಗಾಯವಾಗಿದ್ದು ಅವರನ್ನ ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಗಿದೆ.
ಇನ್ನೊಂದೆಡೆ ಹೊಸನಗರ ನಗರ ರಾಷ್ಟ್ರೀಯ ಹೆದ್ದಾರಿ 766 ಸಿ ಚಾಲುಕ್ಯ ಹೋಟೆಲ್ ಮುಂಬಾಗದಲ್ಲಿ ಸಂಭವಿಸಿದ ಅಪಘಾತದಲ್ಲಿ ಓರ್ವರು ಸಾವನ್ನಪ್ಪಿದ್ದಾರೆ.
ಮತ್ತಿಮನೆ ಬ್ರಾಹ್ಮಣ ತರುವೆಯಿಂದ ಹೊಸನಗರಕ್ಕೆ ಬರುತ್ತಿದ್ದ 24 ರ ಹರೆಯದ ಹರೀಶ್ ಮೃತರು. ಹೆದ್ದಾರಿ ಕಾಮಗಾರಿ ನಡೆಸುತ್ತಿದ್ದ ನೀರಿನ ಟ್ಯಾಂಕ್ ನ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಕೆಳಕ್ಕೆ ಬಿದ್ದಿದ್ದ ಇವರ ಮೇಲೆ ಟ್ರ್ಯಾಕ್ಟರ್ ಹರಿದಿದೆ. ಪರಿಣಾಮ ತೀವ್ರ ಗಾಯಗೊಂಡ ಹರೀಶ ಚಿಕಿತ್ಸೆ ನೀಡುವ ಮೊದಲೇ ಪ್ರಾಣ ಕಳೆದುಕೊಂಡಿದ್ದಾರೆ.
ಹರೀಶನಿಗೆ ಎರಡು ವರ್ಷದ ಹಿಂದೆ ಮದುವೆಯಾಗಿದ್ದು ಒಂದು ವರ್ಷದ ಒಂದು ಮಗುವಿದ್ದು ಹೆಂಡತಿಯ ಮನೆ ಎಡಚಿಟ್ಟೆಗೆ ಹೋಗುತ್ತಿದ್ದರು ಎನ್ನಲಾಗಿದೆ