ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 17 2025 : ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕುನಲ್ಲಿ ದಂಡಾವತಿಯಲ್ಲಿ ನದಿಯಲ್ಲಿ ವ್ಯಕ್ತಿಯೊಬ್ಬರು ಬಿದ್ದು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಸೊರಬ ತಾಲೂಕಿನ ದಂಡಾವತಿ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಪಟ್ಟಣದ ಕಾನುಕೇರಿ ನಿವಾಸಿ ಕುಮಾರ್ (40) ಕಾಲು ಜಾರಿ ಬಿದ್ದು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಮೃತ ವ್ಯಕ್ತಿಯು ಮೀನು ಹಿಡಿಯಲು ಹೋಗಿದ್ದ ಸಂದರ್ಭದಲ್ಲಿ ಕಾಲುಜಾರಿ ನೀರಿಗೆ ಬಿದ್ದಿರುವ ಸಾಧ್ಯತೆ ಇದೆ. ಕುಮಾರ್ ನೀರಿಗೆ ಬಿದ್ದ ಬೆನ್ನಲ್ಲೆ ಅವರನ್ನು ಮೇಲಕ್ಕೆತ್ತಿದ ಸ್ಥಳೀಯರು ತಕ್ಷಣ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ. ಈ ಕುರಿತು ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಕಾಲು ಜಾರಿ ಸಾವು, ಸೊರಬ, ದಂಡಾವತಿ ನದಿ,ಮುಳುಗಿ ಸಾವು, ಅಪಘಾತ, Soraba, Dandavati river, drowning death, man falls,
Shocking Story of a Mans Drowning in Dandavati River
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!