sagar taluk / ಸಾಗರ, ಶಿವಮೊಗ್ಗ: (malenadutoday) ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿವೆ. ಇದರ ಬೆನ್ನಲ್ಲೆ ಸಾಗರ ತಾಲ್ಲೂಕಿನ ಕಾನಲೆ ಬೋರ್ಡ್ ಬಳಿ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಮೃತ ಯುವಕನನ್ನು ಕಾಗೋಡು ಗ್ರಾಮದ 30 ವರ್ಷ ವಯಸ್ಸಿನ ವೆಂಕಟೇಶ್ ಎಂದು ಗುರುತಿಸಲಾಗಿದೆ. ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ.

ಮೇಲ್ನೋಟಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.
