ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯನ್ನ ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿ!

Malenadu Today

KARNATAKA NEWS/ ONLINE / Malenadu today/ Aug 19, 2023 SHIVAMOGGA NEWS   

ಹಳೇ ಶಿವಮೊಗ್ಗದಲ್ಲಿ ಮಹಿಳೆಯೊಬ್ಬರ ಮೇಲೆ ಚಾಕುವಿನಿಂದ ಇರಿಯಲಾಗಿದೆ. ಕೆ.ಆರ್​.ಪುರಂ ರಸ್ತೆಗೆ ಹೊಂದಿಕೊಂಡಿರುವ ತಿಮ್ಮಪ್ಪನ ಕೊಪ್ಪಲು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಮಹಿಳೆಗೆ ಗಾಯಗಳಾಗಿವೆ.. 

ವ್ಯಕ್ತಿಯೊಬ್ಬ ಮಹಿಳೆಯನ್ನ ಹಿಂಬಾಲಿಸಿ, ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಲ್ಲಿ ಆಕೆಯ ಮೇಲೆ ದಾಳಿ ಮಾಡಿದ್ದಾನೆ. ಅಲ್ಲದೆ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಅಲ್ಲಿದ್ದ ಸ್ಥಳೀಯರು ಕೂಗುತ್ತಾ ಹತ್ತಿರ ಬಂದ ಬೆನ್ನಲ್ಲೆ, ಆರೋಪಿ ಸ್ಥಳದಿಂದ ಪರಾರಿಯಾಗಿದ್ಧಾನೆ. ಇನ್ನೂ ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. 

ಘಟನೆಯಲ್ಲಿ ಗಾಯಗೊಂಡಿರುವ ಮಹಿಳೆಯು ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿಯೇ ಅವರ ಮೇಲೆ ಮುನ್ನಾ ಎಂಬಾತ ದಾಳಿ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಮಹಿಳೆಯ ವಿಚಾರದಲ್ಲಿ ಈ ಹಿಂದೆಯು ಮುನ್ನಾ ಜಗಳ ತೆಗೆದಿದ್ದು, ವೈಯಕ್ತಿಕ ವಿಚಾರಕ್ಕೆ ಚಾಕುವಿನಿಂದ ಇರಿದಿದ್ಧಾನೆ ಎಂದು ಹೇಳಲಾಗುತ್ತಿದೆ.  

ದಾವಣಗೆರೆ-ಶಿವಮೊಗ್ಗ ! ಜೀರೋ ಟ್ರಾಫಿಕ್​ನಲ್ಲಿ ಪುಟ್ಟ ಜೀವ ರಕ್ಷಣಾ ಕಾರ್ಯಾಚರಣೆ!

ಹುಟ್ಟಿದ ಒಂದು ದಿನದ ಮಗುವನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ದಾವಣಗೆಯಿಂದ ಶಿವಮೊಗ್ಗಕ್ಕೆ ಸ್ಥಳಾಂತರಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಗುವನ್ನು ದಾವಣಗೆರೆಯ ಚಿಟಗೇರಿ ಆಸ್ಪತ್ರೆಯಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ವಿಶೇಷ ಆ್ಯಂಬುಲೆನ್ಸ್ ನೊಂದಿಗೆ ಮಗುವಿನ ರವಾನೆಗೆ, ಟ್ರಾಫಿಕ್​ ಪೊಲೀಸರು ಹಾಗೂ ಆ್ಯಂಬುಲೆನ್ಸ್​ ಚಾಲಕರು ಸಾಥ್ ನೀಡಿದ್ದಾರೆ. 

ಹಾಲೇಶ್ ದಂಪತಿಯ ಮಗು ಹುಟ್ಟುವಾಗಲೆ ಅನಾರೋಗ್ಯದಿಂದ ಬಳಲಿದೆ. ಈ ಹಿನ್ನೆಲೆಯಲ್ಲಿ ಆ ಮಗುವಿಗೆ ಹೆಚ್ಚಿನ ಚಿಕಿತ್ಸೆ ಒದಗಿಸಲು ಶಿವಮೊಗ್ಗ ಆಸ್ಪತ್ರೆಗೆ ಶಿಫ್ಟ್  ಮಾಡುವ ಅನಿವಾರ್ಯ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಎರಡು ಜಿಲ್ಲೆಯ ಪೊಲೀಸರ ಸಹಾಯ ಪಡೆದು ಆ್ಯಂಬುಲೆನ್ಸ್​ನಲ್ಲಿ ಮಗುವನ್ನು ಶಿವಮೊಗ್ಗ ಏಂಜೆಲ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಮಗುವಿಗೆ ವಿಶೇಷ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದಾರೆ. 

ಇನ್ನಷ್ಟು ಸುದ್ದಿಗಳು


 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು

 

Share This Article