ಸಾಗರ ತಾಲ್ಲೂಕು ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಡಸೂರಿನಲ್ಲಿ ವ್ಯಕ್ತಿಯ ಹತ್ಯೆ

ಹಂಚಿಕೊಳ್ಳಿ
WhatsApp Facebook X Telegram
ಸಾಗರ ತಾಲೂಕಿನ ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಡಸೂರು ಕಲ್ಮನೆ ಕೇರಿ ನಿವಾಸಿ ಆನಂದ ಪೂಜಾರಿ ಹತ್ಯೆಯಾಗಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮಲೆನಾಡು ಟುಡೆ ಸುದ್ದಿ / ಸಾಗರ / ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಡಸೂರು (Madasuru Villagers) ಕಲ್ಮನೆ ಕೇರಿ ನಿವಾಸಿ ಆನಂದ ಪೂಜಾರಿ ಅವರನ್ನು ರಾತ್ರಿ ವೇಳೆ ಹತ್ಯೆ ಮಾಡಿರುವ ಘಟನೆ ನಡೆದಿದೆ , ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ಹೋಗಿದ್ದಾಗ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಕೊಲೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಘಟನೆ ಕುರಿತು ಮಾಹಿತಿ ಪಡೆದ ಸಾಗರ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಸಂಬಂಧ ತನಿಖೆ ಕೈಗೊಂಡಿದ್ದಾರೆ.

ಈ ಬಗ್ಗೆ ಊರಿನ ಮುಖಂಡ ಹಾಗೂ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಡಸೂರು ವೀರೇಂದ್ರ ಅವರ ನೇತೃತ್ವದಲ್ಲಿ ಗ್ರಾಮಸ್ಥರು ಆರೋಪಿಗಳ ವಿರುದ್ಧ ತ್ವರಿತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ ಎಂದು ಸ್ಥಳೀಯವಾಗಿ ಮಾಹಿತಿ ಲಭ್ಯವಾಗಿದೆ. ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಡಿವೈಎಸ್‌ಪಿ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor