ಶಿವಮೊಗ್ಗ : 22 ವರ್ಷದ ಯುವಕನಿಗೆ 20 ವರ್ಷ ಸೆರೆವಾಸ! ಮದುವೆಯಾಗಿದ್ದರೂ ತಪ್ಪಲ್ಲ ಶಿಕ್ಷೆ

ಹಂಚಿಕೊಳ್ಳಿ
WhatsApp Facebook X Telegram
Shimoga Court Sentences Two to Prison for Death Caused by Illegal Electric Fence ತಂತಿ ಬೇಲಿಗೆ ಕರೆಂಟ್ ಕೊಟ್ಟಿದ್ದಕ್ಕೆ ಇಬ್ಬರಿಗೆ ತಲಾ ಒಂದು ವರ್ಷ ಶಿಕ್ಷೆ! ಕೋಣೆಹೊಸೂರು ಕೇಸ್ ಇತ್ಯರ್ಥ! ನಡೆದಿದ್ದು ಹೀಗೆ
shivamogga court justice

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 26 2025 :  ಶಿವಮೊಗ್ಗ ಕೋರ್ಟ್​ ಮತ್ತೊಂದು ಅಪ್ರಾಪ್ತ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮಹತ್ವದ ಶಿಕ್ಷೆ ನೀಡಿದೆ. ಆರೋಪಿಯೊಬ್ಬನಿಗೆ 20 ವರ್ಷ ಸೆರೆವಾಸ ವಿಧಿಸಿದೆ. 

ಏನಿದು ಪ್ರಕರಣ : 2022ರಲ್ಲಿ ಜಿಲ್ಲೆಯ ತಾಲ್ಲೂಕು ಒಂದರಲ್ಲಿ 19 ವರ್ಷದ ಯುವಕನೊಬ್ಬ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಆರೋಪಿ ಸಂತ್ರಸ್ತ ಬಾಲಕಿಯನ್ನು ಮದುವೆಯಾಗಿದ್ದ. ಈ ಕುರಿತಾಗಿ ಸಂತ್ರಸ್ತ ಬಾಲಕಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗದ ಪೊಲೀಸ್​  ಠಾಣೆ ಒಂದರಲ್ಲಿ ಪೋಕ್ಸೋ (POCSO) ಮತ್ತು ಪಿಸಿಎಂ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಆಗಿನ ಇನ್ಸ್‌ಪೆಕ್ಟರ್ ಅಭಯ್ ಪ್ರಕಾಶ್ ಸೋಮನಾಳ್ ಅವರು ಪೂರ್ಣಗೊಳಿಸಿದ್ದಷ್ಟೆ ಅಲ್ಲದೆ  ಆರೋಪಿ ವಿರುದ್ದ ಕೋರ್ಟ್​ಗೆ ಚಾರ್ಜ್​​ಶೀಟ್​ ಸಲ್ಲಿಸಿದ್ದರು. ಶಿವಮೊಗ್ಗದ FTSC-1 ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸರ್ಕಾರಿ ಅಭಿಯೋಜಕರಾಧ ಶ್ರೀಧರ್ ಹೆಚ್.ಆರ್ ವಾದ ಮಂಡಿಸಿದ್ದರು.  ನ್ಯಾಯಾಧೀಶರಾದ  ನಿಂಗನಗೌಡಾ ಭ. ಪಾಟೀಲ್ ಅವರು ದಿನಾಂಕ: 23-09-2025 ರಂದು ಆರೋಪಿಗೆ ಕಲಂ 6 ಪೋಕ್ಸೋ ಕಾಯ್ದೆಯಡಿ 20 ವರ್ಷಗಳ ಕಠಿಣ ಕಾರಾಗೃಹ ವಾಸ ಮತ್ತು 50,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

Man Sentenced to 20 Years in Prison

Shivamogga police station, POCSO case verdict Shivamogga,Child marriage law India,Juvenile sexual assault case, File a POCSO complaint,Legal aid for POCSO victims in Karnataka, ಪೋಕ್ಸೋ ಕಾಯ್ದೆ, ಶಿವಮೊಗ್ಗ ನ್ಯಾಯಾಲಯ ತೀರ್ಪು, ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ, ಭದ್ರಾವತಿ ಲೈಂಗಿಕ ದೌರ್ಜನ್ಯ, 20 ವರ್ಷ ಜೈಲು ಶಿಕ್ಷೆ

ಇದನ್ನು ಸಹ ಓದಿ : ಸ್ವಾತಿ ಪ್ರೇಮ ಪ್ರಕರಣ, ನಿಜಕ್ಕೂ ನಡೆದಿದ್ದೇನು, ಕೊಲೆನಾ.? ಆತ್ಮಹತ್ಯೆನಾ.? ಕಿರುಕುಳನಾ.? ಜೆಪಿ ಬರೆಯುತ್ತಾರೆ 

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business,   malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

 

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor