ಸಾಗರ: ಮಾರ್ಕೇಟ್​​ ಬಳಿ ಎಂಡಿಎಂಎ ಮಾದಕ ವಸ್ತು ಮಾರಾಟ, ಯುವಕನ ಬಂಧನ !

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಸಾಗರ ನಗರದ ಸಂತೆ ಮಾರುಕಟ್ಟೆ ಪ್ರದೇಶದಲ್ಲಿ ಅಕ್ರಮವಾಗಿ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಯುವಕನೊಬ್ಬನನ್ನು ಸಾಗರ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. 

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯುವ ಕಾಂಗ್ರೆಸ್‌ನ 65ನೇ ಸಂಸ್ಥಾಪನಾ ದಿನಾಚರಣೆ: ಯುವಶಕ್ತಿಗೆ ನಾಯಕರ ಕರೆ!

MDMA Drug Peddler ಘಟನೆಯ ವಿವರ

ಸಾಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್.ಎನ್. ನಗರದ ಸಂತೆ ಮಾರುಕಟ್ಟೆ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಕೆಮಿಕಲ್ ಡ್ರಗ್ ಎಂಡಿಎಂಎ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು.  ಈ ಹಿನ್ನೆಲೆ ಸಾಗರ ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿಯನ್ನೊಳಗೊಂಡ ತಂಡವು ತಕ್ಷಣವೇ ದಾಳಿ ನಡೆಸಿದೆ. 

ದಾಳಿಯ ವೇಳೆ ಸಾಗರ ಮೂಲದ ಹಫೀಜ್ ಉರ್ ರೆಹಮಾನ್ (27 ವರ್ಷ) ಎಂಬ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಆತನಿಂದ ಅಂದಾಜು 20,000 ಮೌಲ್ಯದ 06 ಗ್ರಾಂ 77 ಮಿಲಿ ಗ್ರಾಂ ತೂಕದ ಮಾರಕ ಎಂಡಿಎಂಎ ಮಾದಕ ವಸ್ತುವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor