ಬಾರಂದೂರು ಕ್ರಾಸ್ ಬಳಿ ಟ್ರ್ಯಾಕ್ಟರ್ & ಕಾರು ಡಿಕ್ಕಿ | ಮೆಡಿಕಲ್ ವಿದ್ಯಾರ್ಥಿನಿ ಸಾವು | ನಾಲ್ವರಿಗೆ ಗಂಭೀರ ಗಾಯ
medical student died in accident, Barandur Cross in Bhadravathi taluk, Shivamogga district

SHIVAMOGGA | MALENADUTODAY NEWS | ಮಲೆನಾಡು ಟುಡೆ Jan 18, 2025
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಬಾರಂದೂರು ಕ್ರಾಸ್ ಬಳಿ ಸಂಭವಿಸಿದ ಅಪಘಾತವೊಂದರಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಟ್ರ್ಯಾಕ್ಟರ್ ಹಾಗೂ ಕಾರು ನಡುವೆ ಡಿಕ್ಕಿಯಾದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಅವರನ್ನು ತರೀಕೆರೆಯ ಅಮೃತಾಪುರ ಮೂಲದವರು ಎನ್ನಲಾಗುತ್ತಿದ್ದು, ಕೃತಿ ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ MBBS ಓದುತ್ತಿದ್ದರು ಎಂದು ತಿಳಿದುಬಂದಿದೆ
ಇವರು ತರೀಕೆರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಹಾಗೂ ಟ್ರಾಕ್ಟರ್ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಟ್ರ್ಯಾಕ್ಟರ್ ರಸ್ತೆಯಲ್ಲಿಯೇ ಪಲ್ಟಿಯಾಗಿದೆ. ಪೇಪರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಈ ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ.
SUMMARY | medical student died on the spot in an accident that occurred near Barandur Cross in Bhadravati taluk of Shivamogga district.
KEY WORDS |medical student died in accident, Barandur Cross in Bhadravathi taluk, Shivamogga district