Medical Students Die in Circuit House Circle ಶಿವಮೊಗ್ಗ, malenadu today news : August 20 2025 : ಶಿವಮೊಗ್ಗ ನಗರದಲ್ಲಿ ಬೆಳಗಿನ ಜಾವ ಭೀಕರ ಅಪಘಾತವೊಂದು ಸಂಭವಿಸಿದೆ. ಹಾಲಿನ ವ್ಯಾನ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.ಘಟನೆಯ ವಿವರ ಹೀಗಿದೆ.
ನಗರದ ಸರ್ಕಿಟ್ ಹೌಸ್ ಸರ್ಕಲ್ ಸಮೀಪ ಈ ಘಟನೆ ಸಂಭವಿಸಿದೆ. ನಂದಿನಿ ಹಾಲಿನ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಯಾಗಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.
ಮೃತಪಟ್ಟವರನ್ನು ಉಡುಪಿ ಮೂಲದ ಆದಿತ್ಯ ಮತ್ತು ಹೊನ್ನಾಳಿ ಮೂಲದ ಸಂದೀಪ್ ಎಂದು ಗುರುತಿಸಲಾಗಿದೆ. ಇಬ್ಬರೂ ಮೂರನೇ ವರ್ಷದ ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳಾಗಿದ್ದರು. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ, ಸ್ಥಳದಲ್ಲಿ ಹಾಲು, ರಕ್ತ ಚೆಲ್ಲಾಡಿತ್ತು
ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ, ನಮ್ಮ ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಿ
ವಿದ್ಯಾರ್ಥಿಗಳಿಬ್ಬರು ಹೆಲ್ಮೆಟ್ ಧರಿಸಿಲ್ಲ, ಹೆಡ್ ಇಂಜುರಿಯಿಂದಲೇ ಇಬ್ಬರಿಗೂ ತೀವ್ರ ರಕ್ತಸ್ರಾವವಾಗಿದೆ. ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸದ್ಯ ಇಬ್ಬರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು, ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮ ಮಲೆನಾಡು ಟುಡೆಯ ಪ್ರತಿ ಸುದ್ದಿಗಳನ್ನು ಓದಲು ನಮ್ಮ ವಾಟ್ಸಾಪ್ ಚಾನಲ್ ಗೆ ಕ್ಲಿಕ್ ಮಾಡಿ ಜಾಯಿನ್ ಆಗಿ..
Medical Students Die in Circuit House Circle