SHIVAMOGGA NEWS TODAY

ಶಿವಮೊಗ್ಗದಲ್ಲಿ ಬೃಹತ್ ಜಿಲ್ಲಾ ಮಟ್ಟದ ಉದ್ಯೋಗ ಮೇಳ: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗಿ, ಯಾವಾಗ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ : ಜಿಲ್ಲೆಯ ನಿರುದ್ಯೋಗಿ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಫೆಬ್ರವರಿ 27ರಂದು ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಆವರಣದಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್ ಅವರು ತಿಳಿಸಿದ್ದಾರೆ. 

ದಾವಣಗೆರೆ, ಶಿವಮೊಗ್ಗ, ಸಾಗರ, ಶಿರಸಿ, ಮಂಗಳೂರು ಅಡಿಕೆ ರೇಟು ಎಷ್ಟಿದೆ? ಇಲ್ಲಿದೆ ಪೂರ್ಣ ಪಟ್ಟಿ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಂದು ಬೆಳಿಗ್ಗೆ 10:30ಕ್ಕೆ ಮೇಳ ಆರಂಭವಾಗಲಿದ್ದು, ಅರ್ಹ ಅಭ್ಯರ್ಥಿಗಳು ಈ ಸುವರ್ಣಾವಕಾಶದ ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದ್ದಾರೆ. 

ಈ ಬೃಹತ್ ಮೇಳದಲ್ಲಿ ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 50ಕ್ಕೂ ಹೆಚ್ಚು ಖ್ಯಾತ ಕಂಪನಿಗಳು ಭಾಗವಹಿಸಿ ಸ್ಥಳದಲ್ಲೇ ನೇಮಕಾತಿ ಪ್ರಕ್ರಿಯೆ ನಡೆಸಲಿವೆ. ಎಸ್‌ಎಸ್‌ಎಲ್‌ಸಿ ಪಾಸಾದವರು ಅಥವಾ ಫೇಲಾದವರು ಸೇರಿದಂತೆ ಪಿಯುಸಿ, ಪದವಿ, ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ಪೂರೈಸಿದ ಅಭ್ಯರ್ಥಿಗಳು ಪಾಲ್ಗೊಳ್ಳಲು ಅವಕಾಶವಿದೆ. ವಿಶೇಷವಾಗಿ ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಈ ಮೇಳದಲ್ಲಿ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿದ್ದು, ಉಚಿತ ಪ್ರವೇಶಾವಕಾಶ ಕಲ್ಪಿಸಲಾಗಿದೆ. 

ಐಟಿ, ಕಂಪ್ಯೂಟರ್, ಆಟೋಮೊಬೈಲ್, ಬ್ಯಾಂಕಿಂಗ್ ಹಾಗೂ ನರ್ಸಿಂಗ್ ಸೇರಿದಂತೆ ವಿವಿಧ ವಲಯಗಳಲ್ಲಿ ಕೆಲಸದ ಅವಕಾಶಗಳಿದ್ದು, ಪ್ರಸ್ತುತ ಓದುತ್ತಿರುವ ವಿದ್ಯಾರ್ಥಿಗಳು ಇಂಟರ್ನ್‌ಶಿಪ್‌ಗಾಗಿ ಕೂಡ ನೋಂದಾಯಿಸಿಕೊಳ್ಳಬಹುದಾಗಿದೆ. 

ಆಸಕ್ತರು ತಮ್ಮ ಸ್ವವಿವರ, ಭಾವಚಿತ್ರ, ಆಧಾರ್‌ಕಾರ್ಡ್‌, ತಮ್ಮ ಶೈಕ್ಷಣಿಕ ವಿದ್ಯಾರ್ಹತೆಯ ಪ್ರಮಾಣಪತ್ರ ಹಾಗೂ ಅವುಗಳ ಐದು ಝೆರಾಕ್ಸ್‌ಪ್ರತಿಗಳೊಂದಿಗೆ ಭಾಗವಹಿಸಬಹುದಾಗಿದೆ. ಆನ್‌ಲೈನ್‌ಮೂಲಕ ಹಾಗೂ ಉದ್ಯೋಗಮೇಳದ ಸ್ಥಳದಲ್ಲಿ ಖುದ್ದಾಗಿ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದವರು ತಿಳಿಸಿದರು.

ಆಸಕ್ತರು ಹೆಚ್ಚಿನ ವಿವರಗಳಿಗಾಗಿ ಎನ್.‌ಆರ್.‌ಎಲ್.‌ಎಂ.ಘಟಕ, ಜಿಲ್ಲಾ ಪಂಚಾಯತ್‌ಶಿವಮೊಗ್ಗ ಮತ್ತು ತಾಲೂಕು ಪಂಚಾಯತ್‌ಎನ್.‌ಆರ್.‌ಎಲ್.‌ಎಂ.ವಿಭಾಗಗಳನ್ನು ಸಂಪರ್ಕಿಸಬಹುದಾಗಿದೆ ಎಂದವರು ತಿಳಿಸಿದರು.

Mega Job Fair in Shimoga on Feb 27

Mega Job Fair in Shimoga on Feb 27
Mega Job Fair in Shimoga on Feb 27

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.