ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 18 2025 : ಶಿವಮೊಗ್ಗದಲ್ಲಿ ಲೋಕ್ ಅದಾಲತ್ ದಾಖಲೆ ಬರೆದಿದೆ. ಸೆ.13 ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಒಟ್ಟು 1,46,464 ಪ್ರಕರಣಗಳನ್ನು ರಾಜಿ ಸಂಧಾನ ಮಾಡಿಸುವ ಮೂಲಕ ಇತ್ಯರ್ಥ ಪಡಿಸಲಾಗಿದೆ. ಈ ಬಗ್ಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ಎಸ್. ಸಂತೋಷ್ ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆ ಹಂತದಲ್ಲಿ ಬಾಕಿ ಇದ್ದ ವಿವಿಧ ಸ್ವರೂಪದ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ಪ್ರಕರಣಗಳನ್ನು ರಾಜಿ ಮಾಡಿಸಲು ಶಿವಮೊಗ್ಗ ಜಿಲ್ಲೆಯಲ್ಲಿನ ಎಲ್ಲಾ ತಾಲ್ಲೂಕುಗಳ ನ್ಯಾಯಾಲಗಳನ್ನು ಒಳಗೊಂಡಂತೆ ಒಟ್ಟು 38 ಲೋಕ್ ಅದಾಲತ್ ಪೀಠಗಳನ್ನು ರಚನೆ ಮಾಡಲಾಗಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ರವರ ಮಾರ್ಗದರ್ಶನದಲ್ಲಿ ವಿವಿಧ ಪ್ರಕರಣಗಳನ್ನು ರಾಜಿ ಸಂಧಾನ ಮಾಡಿಸಲಾಯಿತು ಎಂದು ತಿಳಿಸಿದ್ದಾರೆ.
ವಿವಿಧ ಸ್ವರೂಪದ 14,550 ಹಾಗೂ ವ್ಯಾಜ್ಯ ಪೂರ್ವ 1,13,914 ಪ್ರಕರಣಗಳನ್ನು ರಾಜಿ ಸಂಧಾನ ಮಾಡಲಾಗಿದ್ದು, ಇವುಗಳ ಪೈಕಿ 16 ದಂಪತಿಗಳು ತಮ್ಮ ಪ್ರಕರಣವನ್ನು ಹಿಂಪಡೆದು ಒಟ್ಟಾಗಿ ಜೀವನ ನಡೆಸುವಂತೆ ರಾಜಿ ಮಾಡಿಕೊಂಡಿದ್ದು ವಿಶೇಷವಾಗಿದೆ. ಹತ್ತು ವರ್ಷಕ್ಕಿಂತ ಹಳೆಯದಾದ 6, ಐದು ವರ್ಷಕ್ಕಿಂತ ಹಳೆಯದಾದ 49 ಹಾಗೂ ಹಿರಿಯ ನಾಗರೀಕರಿಗೆ ಸಂಬಂಧಿಸಿದ ಒಟ್ಟು 31 ಪ್ರಕರಣಗಳು ರಾಜಿ ಸಂಧಾನದಿಂದ ಇತ್ಯರ್ಥಗೊಂಡಿವೆ ಎಂದು ಮಾಹಿತಿ ನೀಡಿದ್ದಾರೆ.

ಲೋಕ್ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಧೀಶರು, ನ್ಯಾಯಾಲಯದ ಸಿಬ್ಬಂದಿ, ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ಸರ್ಕಾರಿ ಅಭಿಯೋಜಕರು, ಶಿವಮೊಗ್ಗ ಜಿಲ್ಲೆಯ ಹಾಗೂ ಎಲ್ಲಾ ತಾಲ್ಲೂಕಿನ ವಕೀಲದ ಸಂಘದ ಅಧ್ಯಕ್ಷರು ಮತ್ತು ಎಲ್ಲಾ ಸದಸ್ಯರು, ವಿವಿಧ ವಿಮೆ ಕಂಪನಿಯ ಹಾಗೂ ಬ್ಯಾಂಕ್ ಅಧಿಕಾರಿಗಳು, ಅವುಗಳ ಪ್ಯಾನಲ್ ವಕೀಲರುಗಳು ಹಾಗೂ ಕಕ್ಷಿದಾರರು ಸಕ್ರೀಯವಾಗಿ ಭಾಗವಹಿಸಿದ್ದರು.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

ಶಿವಮೊಗ್ಗ ಲೋಕ ಅದಾಲತ್, ಪ್ರಕರಣಗಳ ಇತ್ಯರ್ಥ, ಕಾನೂನು ಸೇವೆಗಳ ಪ್ರಾಧಿಕಾರ, ಜನನ ಪ್ರಮಾಣಪತ್ರ, Shimoga Lok Adalat, Case Settlement, Legal Services Authority, Birth Certificate, National Lok Adalat.